ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಶಂಕಿತನಿಗಾಗಿ ತುಮಕೂರಿನಲ್ಲಿ ಶೋಧ

‘ದಿ ರಾಮೇಶ್ವರಂ ಕೆಫೆ’ ಬಾಂಬ್ ಸ್ಫೋಟ ಪ್ರಕರಣ
Published 6 ಮಾರ್ಚ್ 2024, 19:56 IST
Last Updated 6 ಮಾರ್ಚ್ 2024, 19:56 IST
ಅಕ್ಷರ ಗಾತ್ರ

ತುಮಕೂರು: ಬೆಂಗಳೂರಿನ ‘ದಿ ರಾಮೇಶ್ವರಂ ಕೆಫೆ’ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಆರೋಪಿಗಾಗಿ ನಗರದಲ್ಲಿ ಬುಧವಾರ ರಾತ್ರಿ ಪೊಲೀಸರು ಶೋಧ ನಡೆಸಿದರು.

ಬೆಂಗಳೂರಿನಿಂದ ಬಂದಿದ್ದ ಪೊಲೀಸರಿಗೆ ಜಿಲ್ಲೆಯ ಪೊಲೀಸರು ಸಾಥ್ ನೀಡಿದರು. ತುಮಕೂರು ರೈಲು ನಿಲ್ದಾಣ, ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ, ಮಹಾನಗರ ಪಾಲಿಕೆ ಆವರಣ, ಮಂಡಿಪೇಟೆ ಸೇರಿದಂತೆ ನಗರದ ವಿವಿಧೆಡೆಗಳಲ್ಲಿ ಪರಿಶೀಲನೆ ನಡೆಸಿದರು. 28 ವಾಹನಗಳಲ್ಲಿ ತೆರಳಿರುವ ಪೊಲೀಸರು ವಿವಿಧೆಡೆ ಶೋಧ ನಡೆಸಿದರು.

ಬಾಂಬ್ ಸ್ಫೋಟದ ಶಂಕಿತ ಆರೋಪಿ ತುಮಕೂರಿನಲ್ಲಿ ಓಡಾಡಿದ ಶಂಕೆ ವ್ಯಕ್ತವಾಗಿದೆ. ಪೊಲೀಸರು ಸಿ.ಸಿ ಟಿ.ವಿ ಕ್ಯಾಮೆರಾ ದೃಶ್ಯ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT