ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಧುಗಿರಿ: ಶಾಲಾ– ಕಾಲೇಜಿನಲ್ಲಿ ಸರಣಿ ಕಳ್ಳತನ

Published : 6 ಸೆಪ್ಟೆಂಬರ್ 2024, 3:11 IST
Last Updated : 6 ಸೆಪ್ಟೆಂಬರ್ 2024, 3:11 IST
ಫಾಲೋ ಮಾಡಿ
Comments

ಮಧುಗಿರಿ: ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಪ್ರೌಢಶಾಲೆ, ಡಯಟ್ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸರಣಿ ಕಳ್ಳತನ ನಡೆದಿದೆ.

ಸರ್ಕಾರಿ ಪ್ರೌಢಶಾಲೆಯಲ್ಲಿರುವ ಕಂಪ್ಯೂಟರ್, ಎಲೆಕ್ಟ್ರಾನಿಕ್ ಉಪಕರಣ, ಸಿ.ಸಿ. ಟಿವಿ ಕ್ಯಾಮೆರಾ, ಬಿಸಿ ಊಟಕ್ಕೆ ಸಂಬಂಧಿಸಿದ ಪರಿಕರ ಹಾಗೂ ಆಹಾರ ಧಾನ್ಯಗಳನ್ನು ಡಯಟ್‌ನಲ್ಲಿರುವ ಎಲೆಕ್ಟ್ರಾನಿಕ್ ಉಪಕರಣ, ಪಿಯು ಕಾಲೇಜಿನಲ್ಲಿ ಯುಪಿಎಸ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಳ್ಳರು ಕದ್ದಿದ್ದಾರೆ.

ಕಳ್ಳರು ಮಿನಿ ಲಾರಿಯಲ್ಲಿ ಬಂದು ಈ ಕಳ್ಳತನ ಮಾಡಿದ್ದಾರೆ. ಸರ್ಕಾರಿ ಪ್ರೌಢಶಾಲೆ ಬಾಗಿಲ ಬಳಿ ನಿಲ್ಲಿಸಿಕೊಂಡು ಕಳ್ಳತನ ಮಾಡಿದ್ದಾರೆ. ದ್ವಿಪಥ ರಸ್ತೆಯಲ್ಲಿ ರಾತ್ರಿ ಸಂಚರಿಸಿರುವ ವಾಹನಗಳ ಬಗ್ಗೆ ಸಿ.ಸಿ. ಟಿವಿ ಕ್ಯಾಮೆರಾಗಳನ್ನು ಅಳವಡಿಸಿರುವ ಅಂಗಡಿಗಳಿಂದ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಮದುಗಿರಿ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT