ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಲೇಜುಗಳಲ್ಲಿ ಯುಪಿಎಸ್ ಬ್ಯಾಟರಿ ಸರಣಿ ಕಳವು

Published : 22 ಆಗಸ್ಟ್ 2024, 14:14 IST
Last Updated : 22 ಆಗಸ್ಟ್ 2024, 14:14 IST
ಫಾಲೋ ಮಾಡಿ
Comments

ಶಿರಾ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಬುಧವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ.

ಕಾಲೇಜು ಕಚೇರಿ ಸೇರಿದಂತೆ ವಿವಿಧ ಕೊಠಡಿಗಳ ಬೀಗ ಒಡೆದು ಕಾಲೇಜಿನಲ್ಲಿದ್ದ ಬ್ಯಾಟರಿಗಳನ್ನು ಕಳವು ಮಾಡಲಾಗಿದೆ.

ದುಷ್ಕರ್ಮಿಗಳು ಕಾಲೇಜಿನ ಪ್ರಾಂಶುಪಾಲರ ಕೊಠಡಿ, ಗ್ರಂಥಾಲಯ, ಪ್ರಯೋಗಾಲಯಗಳ ಕೊಠಡಿಲಾಕ್‌ ಒಡೆದು ಒಳಗೆ ನುಗ್ಗಿ, ಸಿಸಿ ಟಿ.ವಿ ಕ್ಯಾಮೆರಾ ಆಫ್ ಮಾಡಿ ಯುಪಿಎಸ್ ಬ್ಯಾಟರಿಗಳನ್ನು ಕಳವು ಮಾಡಿದ್ದಾರೆ. ಬ್ಯಾಟರಿ ಜೊತೆಗೆ ಕಂಪ್ಯೂಟರ್ ಹಾರ್ಡ್ ಡಿಸ್ಕ್ ಮತ್ತು ಸಿಸಿ ಟಿವಿ ಕ್ಯಾಮರಾ ಕದ್ದಿದ್ದಾರೆ.

ಸರ್ಕಾರಿ ಪ್ರಥಮ ಕಾಲೇಜಿನಲ್ಲಿ 28 ಬ್ಯಾಟರಿ, ಪ್ರವಾಸಿ ಮಂದಿರದ ವೃತ್ತದಲ್ಲಿರುವ ಸರ್ಕಾರಿ ಪ್ರಥಮ ಕಾಲೇಜು ವಿಜ್ಞಾನ ವಿಭಾಗದಲ್ಲಿ 24 ಬ್ಯಾಟರಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 24 ಬ್ಯಾಟರಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 22 ಬ್ಯಾಟರಿಗಳನ್ನು ಕಳವು ಮಾಡಿದ್ದಾರೆ.

ಮಹಡಿ ಮೇಲಿದ್ದ ಬ್ಯಾಟರಿಗಳನ್ನು ಕೆಳಗೆ ತಂದು ಅದರಲ್ಲಿದ್ದ ಆ್ಯಸಿಡ್‌ ಅನ್ನು ಕಾಲೇಜು ಆವರಣದಲ್ಲಿ ಚೆಲ್ಲಿರುವ ಕಳ್ಳರು ನಂತರ ವಾಹನದಲ್ಲಿ ಬ್ಯಾಟರಿಗಳನ್ನು ತುಂಬಿಕೊಂಡು ಹೋಗಿದ್ದಾರೆ. ಕಾಲೇಜುಗಳಲ್ಲಿದ್ದ ಎಲ್ಲ ಬ್ಯಾಟರಿಗಳನ್ನು ಕಳವು ಮಾಡಿರುವುದರಿಂದ ಯುಪಿಎಸ್ ವ್ಯವಸ್ಥೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಈ ಬಗ್ಗೆ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT