ತುಮಕೂರು: ಸರಕು ರಫ್ತು ಮಾಡುವಲ್ಲಿ ರಾಜ್ಯವು ದೇಶದಲ್ಲೇ 4ನೇ ಸ್ಥಾನದಲ್ಲಿದೆ. ಸೇವಾ ರಫ್ತಿನಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ಹಣಕಾಸು ವರ್ಷದಲ್ಲಿ ಸುಮಾರು 30 ಬಿಲಿಯನ್ ಡಾಲರ್ ಮೌಲ್ಯದ ಸರಕು ರಫ್ತು ಮಾಡಲಾಗಿದೆ ಎಂದು ಕಾಸಿಯಾ ಅಧ್ಯಕ್ಷ ಬಿ.ಆರ್.ಗಣೇಶ್ ರಾವ್ ಹೇಳಿದರು.

ನಗರದಲ್ಲಿ ಗುರುವಾರ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಆಶ್ರಯದಲ್ಲಿ ಮಧ್ಯಮ, ಸಣ್ಣ, ಕಿರು ಉದ್ದಿಮೆದಾರರ (ಎಂಎಸ್ಎಂಇ) ಕಾರ್ಯಕ್ಷಮತೆ ಹೆಚ್ಚಿಸುವುದು ಹಾಗೂ ರಫ್ತು ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸೇವೆ ರಫ್ತುಗಳಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಸುಮಾರು 160 ಬಿಲಿಯನ್ ಡಾಲರ್ ಮೌಲ್ಯದ ರಫ್ತು ಮಾಡಲಾಗಿದೆ. ಅದರಲ್ಲಿ ಎಂಎಸ್ಎಂಇ ಪಾಲು ಶೇ 28ರಷ್ಟು ಇದೆ. ಈ ವಲಯದ ರಫ್ತು ಹೆಚ್ಚಿಸಲು ಕೇಂದ್ರ ಸರ್ಕಾರ ₹5 ಸಾವಿರ ಕೋಟಿ ಮೊತ್ತದ 7 ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಇವುಗಳಲ್ಲಿ 3 ಯೋಜನೆಗಳು ರಫ್ತುದಾರರಿಗೆ ಹಣಕಾಸು ಸಹಾಯ ಮಾಡಲಿವೆ. 4 ಯೋಜನೆಗಳು ರಫ್ತು ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ನೆರವಾಗಲಿವೆ ಎಂದು ಮಾಹಿತಿ ನೀಡಿದರು.

ಸಮಾರಂಭ ಉದ್ಘಾಟಿಸಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಪಿ.ಕುರಂದವಾಡ, ‘ಕಾಸಿಯಾ ವತಿಯಿಂದ ರಫ್ತು ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವು ಕೈಗಾರಿಕೆ ಹಾಗೂ ಉದ್ಯಮಿಗಳಿಗೆ ಸಹಕಾರಿಯಾಗಿದೆ’ ಎಂದರು.

ವಸಂತನರಸಾಪುರ ಕೈಗಾರಿಕೆಗಳ ಸಂಘದ ಅಧ್ಯಕ್ಷ ಸಿ.ವಿ.ಹರೀಶ್, ‘ಎಂಎಸ್ಎಂಇ ಕಾರ್ಯಕ್ಷಮತೆ, ರಫ್ತು ಜಾಗೃತಿ, ಹೊಸದಾಗಿ ಕೈಗಾರಿಕೆ ಸ್ಥಾಪಿಸುವವರಿಗೆ ನೆರವಾಗಿದೆ’ ಎಂದು ಹೇಳಿದರು.

ಕಾಸಿಯಾ ಉಪಾಧ್ಯಕ್ಷ ನಿಂಗಣ್ಣ ಎಸ್.ಬಿರಾದರ, ಪ್ರಮುಖರಾದ ಸದಾಶಿವ ಆರ್.ಆಮಿನ್, ತುಮಕೂರು ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಸುಜ್ಞಾನ ಹಿರೇಮಠ, ಕೈಗಾರಿಕೋದ್ಯಮಿ ಎಚ್.ಎನ್.ಚಂದ್ರಶೇಖರ್, ವಿ.ದಿನೇಶ್ ಕುಮಾರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.