ಪಾವಗಡ: ಪಟ್ಟಣದ ಧರ್ಮವರಂ ಬಡಾವಣೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕೊಳಚೆ ನೀರು ನಿಂತಿರುವುದರಿಂದ ಸೊಳ್ಳೆಗಳು, ಹಂದಿಗಳ ಕಾಟ ಹೆಚ್ಚಿದೆ. ಈಗಾಗಲೇ ಈ ಬಡಾವಣೆಯಲ್ಲಿ ಸಾಕಷ್ಟು ಮಂದಿ ಜ್ವರ ಸೇರಿದಂತೆ ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಡೆಂಗಿ ಹರಡುವಭೀತಿ ಇದೆ ಎಂದು ಬಡಾವಣೆ ನಿವಾಸಿಗಳು ಆರೋಪಿಸಿದ್ದಾರೆ.
ಸಾಕಷ್ಟು ಬಾರಿ ಪುರಸಭೆ ಅಧಿಕಾರಿಗಳಿಗೆ ಸಮಸ್ಯೆ ಬಗ್ಗೆ ತಿಳಿಸಲಾಗಿದೆ. ಆದರೂ ಈವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕೊಳಚೆ ನೀರು ನಿಲ್ಲದಂತೆ ವ್ಯವಸ್ಥೆ ಮಾಡಿ, ಸಮಸ್ಯೆ ಬಗೆಹರಿಸಬೇಕು ಎಂದು ಬಡಾವಣೆಯ ಶ್ರೀನಾಥ್ ಒತ್ತಾಯಿಸಿದ್ದಾರೆ.