ಶುಕ್ರವಾರ, ಫೆಬ್ರವರಿ 21, 2020
29 °C

ಎಸ್‌ಎಫ್‌ಸಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಎಸ್‌ಎಫ್‌ಸಿ ವಿಶೇಷ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಪಾಲಿಕೆ ಸದಸ್ಯೆ ನಾಜೀಮಾ ಬೀ ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ಮನವಿ ಸಲ್ಲಿಸಿದ್ದಾರೆ.

2019–20ನೇ ಸಾಲಿನ ಎಸ್‌ಎಫ್‌ಸಿ ವಿಶೇಷ ಅನುದಾನದಡಿ ಮಹಾನಗರ ಪಾಲಿಕೆಗೆ ₹15 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನಕ್ಕೆ ರೂಪಿಸಿರುವ ಕ್ರಿಯಾ ಯೋಜನೆಯಲ್ಲಿ ವಾರ್ಡ್‌ವಾರು ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಅವರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ಮನವಿಗೆ ಸಂಬಂಧಿಸಿದಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮನವಿಯನ್ನು ಪಾಲಿಕೆ ಆಯುಕ್ತರಿಗೆ ರವಾನಿಸಿ, ಈ ಕುರಿತು ನಿಯಮಾನುಸಾರ ಕ್ರಮವಹಿಸಲು ಹಾಗೂ ತೆಗೆದುಕೊಂಡ ಕ್ರಮದ ಕುರಿತು ಸದಸ್ಯರಿಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು