ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಎಸ್‌ಟಿ ಪಾಲು; ಸಂಸದರು ಧ್ವನಿ ಎತ್ತಿ

ಜಿ.ಎಸ್.ಬಸವರಾಜ್ ಕಚೇರಿ ಎದುರು ಪ್ರತಿಭಟಿಸಿದ ಸಿಪಿಎಂ ಕಾರ್ಯಕರ್ತರು
Last Updated 19 ಸೆಪ್ಟೆಂಬರ್ 2020, 16:54 IST
ಅಕ್ಷರ ಗಾತ್ರ

ತುಮಕೂರು: ರಾಜ್ಯವು ಕೊರೊನಾ, ಬರ, ನೆರೆ ಸಂಕಷ್ಟ ಎದುರಿಸುತ್ತಿದೆ. ಹೀಗಿರುವಾಗ ರಾಜ್ಯಕ್ಕೆ ಬರಬೇಕಾದ ಜಿಎಸ್‍ಟಿ ಪಾಲು ನೀಡದೆ ರಾಜ್ಯಕ್ಕೆ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅನ್ಯಾಯ ಮಾಡುತ್ತಿದೆ. ಕೂಡಲೇ ರಾಜ್ಯಕ್ಕೆ ನೀಡಬೇಕಾದ ಜಿಎಸ್‍ಟಿ ಪಾಲು ನೀಡಬೇಕು. ಈ ಬಗ್ಗೆ ಸಂಸದರು ಧ್ವನಿ ಎತ್ತಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ ಆಗ್ರಹಿಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿಯ ಸಂಸದ ಜಿ.ಎಸ್.ಬಸವರಾಜ್ ಅವರ ಕಚೇರಿ ಬಳಿ ಸಿಪಿಎಂ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ದೇಶ ಕಳೆದ ಒಂದು ದಶಕದಿಂದ ಗಂಭೀರವಾದ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂದರು.

ಸಿಪಿಎಂ ರಾಜ್ಯ ಸಮಿತಿ ಸದಸ್ಯ ಸೈಯದ್‍ ಮುಜೀಬ್, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಬಿ.ಉಮೇಶ್ ಮಾತನಾಡಿದರು. ಸಂಸದರ ಆಪ್ತ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಸಮಿತಿ ಸದಸ್ಯರಾದ ಸಿ.ಅಜ್ಜಪ್ಪ, ಇ.ಶಿವಣ್ಣ, ನಗರಕಾರ್ಯದರ್ಶಿ ಎಸ್.ರಾಘವೇಂದ್ರ, ಇಬ್ರಾಹಿಂ, ಶಹತಾಜ್, ರಂಗಧಾಮಯ್ಯ, ಇಂತು, ಲಕ್ಷ್ಮಮ್ಮ, ವಾಸೀಮ್, ರಾಜು, ಜಗದೀಶ್ ಪ್ರತಿಭಟನೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT