ತುಮಕೂರು: ನಗರ ಹೊರ ವಲಯದ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ಮಂಗಳವಾರ ಅಪಾರ ಸಂಖ್ಯೆ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.

ಆಂಜನೇಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇಗುಲವನ್ನು ತಳಿರು, ತೋರಣಗಳಿಂದ ಸಿಂಗರಿಸಲಾಗಿತ್ತು. ರಥೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿದವು. ಪ್ರಾರಂಭದಲ್ಲಿ ರಥದಲ್ಲಿ ದೇವರನ್ನು ಕೂರಿಸಿ ಬಳಿಕ ರಥದ ಸುತ್ತ ಗರುಡ ಮೂರು ಸುತ್ತು ಪ್ರದಕ್ಷಿಣೆ ಹಾಕಿತು. ನಂತರ ರಥೋತ್ಸವಕ್ಕೆ ಚಾಲನೆ ದೊರೆಯಿತು.

ನಗರ ಮತ್ತು ಶೆಟ್ಟಿಹಳ್ಳಿ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರು ಬೆಳಗ್ಗೆಯೇ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಧ್ಯಾಹ್ನ ನೆರವೇರಿದ ರಥೋತ್ಸವಕ್ಕೆ ಸಾಕ್ಷಿಯಾದರು. ರಥಕ್ಕೆ ಹೂವು, ದವನ, ಬಾಳೆಹಣ್ಣು ಎಸೆದು ನಮಿಸಿದರು. ಶೆಟ್ಟಿಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ, ರಿಂಗ್ ರಸ್ತೆಯ ವಿವಿಧ ಕಡೆಗಳಲ್ಲಿ ಶಾಮಿಯಾನ ಹಾಕಿ ರಥೋತ್ಸವಕ್ಕೆ ಬರುವ ಜನರಿಗೆ ಮಜ್ಜಿಗೆ, ಪಾನಕ ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.