ಶನಿವಾರ, ಜುಲೈ 24, 2021
27 °C
ಅಧ್ಯಕ್ಷರಾಗಿ ಚಂದ್ರೇಗೌಡ, ಉಪಾಧ್ಯಕ್ಷರಾಗಿ ಕೆ.ಸಿ.ರಾಮರಾಜು ಆಯ್ಕೆ

ಶಿರಾ ಎಪಿಎಂಸಿ: ಜೆಡಿಎಸ್– ಬಿಜೆಪಿ ಮೈತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಚಂದ್ರೇಗೌಡ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೆ.ಸಿ.ರಾಮರಾಜು ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯು ಜೆಡಿಎಸ್ ಅನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದವು.

ಎಪಿಎಂಸಿಯಲ್ಲಿ 7 ಮಂದಿ ಕಾಂಗ್ರೆಸ್ ಬೆಂಬಲಿತರು, 5 ಮಂದಿ ಜೆಡಿಎಸ್ ಬೆಂಬಲಿತ ಹಾಗೂ ಒಬ್ಬರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು. ಸರ್ಕಾರ 3 ಮಂದಿ ನಾಮ ನಿರ್ದೇಶನ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತರ ಬಲ 4ಕ್ಕೆ ಏರಿಕೆಯಾಗಿತ್ತು.

ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಜಿ.ಚಂದ್ರೇಗೌಡ (ಮದಲೂರು ಕ್ಷೇತ್ರ) ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸಿದ್ದಪ್ಪ (ಬರಗೂರು ಕ್ಷೇತ್ರ) ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೆ.ಸಿ.ರಾಮರಾಜು (ಕಳ್ಳಂಬೆಳ್ಳ ಕ್ಷೇತ್ರ) ಹಾಗೂ ಕಾಂಗ್ರೆಸ್ ಬೆಂಬಲಿತ ರಂಗಮ್ಮ (ಬುಕ್ಕಾಪಟ್ಟಣ ಕ್ಷೇತ್ರ) ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಯಲ್ಲಿ ಜಿ.ಚಂದ್ರೇಗೌಡ ಅವರಿಗೆ 9 ಮತಗಳು, ಸಿದ್ದಪ್ಪ ಅವರಿಗೆ 6 ಮತಗಳು ಬಂದರೆ ಒಂದು ಮತ ತಿರಸ್ಕೃತ ಗೊಂಡಿತು.

ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೆ.ಸಿ.ರಾಮರಾಜು ಅವರಿಗೆ 9 ಮತಗಳು ಹಾಗೂ ರಂಗಮ್ಮ ಅವರಿಗೆ 7 ಮತಗಳು ಬಂದವು.

ಅತಿ ಹೆಚ್ಚು ಮತ ಪಡೆದ ಜಿ.ಚಂದ್ರೇಗೌಡ ಅವರನ್ನು ಅಧ್ಯಕ್ಷರು ಎಂದು ಹಾಗೂ ಕೆ.ಸಿ.ರಾಮರಾಜು ಅವರನ್ನು ಉಪಾಧ್ಯಕ್ಷರು ಎಂದು ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿ ನಾಹಿದಾ ಜಮ್ ಜಮ್ ಘೋಷಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು