ಶಿರಾ: ತಾಲ್ಲೂಕಿನ ಗೌಡಗೆರೆ ಹೋಬಳಿಯ ಬೆಟ್ಟಪ್ಪನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆದಿಶಕ್ತಿ ಬೇವಿನ ಹಳ್ಳಮ್ಮ ದೇವಿ ಜಾತ್ರಾ ಮಹೋತ್ಸವ ನಡೆಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಟಿ.ಬಿ. ಜಯಚಂದ್ರ ಮಾತನಾಡಿ, ‘ದ್ವೇಷ, ಅಸೂಯೆ ಬಿಟ್ಟು ಎಲ್ಲರಲ್ಲೂ ನಾನೂ ಒಬ್ಬ ಎಂಬ ಭಾವನೆಯೊಂದಿಗೆ ಒಗ್ಗೂಡಿ ಜೀವನ ಕಟ್ಟಿಕೊಂಡಾಗ ಸಮಾಜದಲ್ಲಿ ನೆಮ್ಮದಿ ಮೂಡಲು ಸಾಧ್ಯ’ ಎಂದು ಹೇಳಿದರು.

ಬೇವಿನ ಹಳ್ಳಮ್ಮ ದೇವಸ್ಥಾನ ಅಭಿವೃದ್ಧಿಗೆ ₹10 ಲಕ್ಷ ನೀಡುವುದಾಗಿ ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಮಾತನಾಡಿ, ಬೇವಿನ ಹಳ್ಳಮ್ಮ ದೇವಸ್ಥಾನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸೂರ್ಯಬಿಂಬ ಯೋಜನೆಯಡಿ ಸೋಲಾರ್ ಹೈ ಮಾಸ್ಟ್ ದೀಪ ಹಾಕಿಸುವುದಾಗಿ ಹೇಳಿದರು.

ಮಾಜಿ ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ, ಜೆಡಿಎಸ್ನ ಆರ್.ಉಗ್ರೇಶ್, ಕಲ್ಕೆರೆ ರವಿಕುಮಾರ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್, ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಹಳ್ಳಿಕಾರ ಸಮುದಾಯದ ಕೆ.ಎಂ.ನಾಗರಾಜು ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ, ಪೊಲೀಸ್ ಎಸಿಪಿ ಮಂಜುನಾಥ್, ಸಾರಿಗೆ ಅಧಿಕಾರಿ ಮಂಜುನಾಥ್, ಡಾ.ಡಿ.ಎಂ.ಗೌಡ, ಬೆಟ್ಟಪ್ಪನಹಳ್ಳಿ ನಂದೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ನರಸಿಂಹೇಗೌಡ, ಕೃಷ್ಣೆ ಗೌಡ, ಬಿ.ಜಿ. ಶಿವಶಂಕರ, ಆನಂದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-17-754438472

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.