ಶುಕ್ರವಾರ, ಅಕ್ಟೋಬರ್ 30, 2020
26 °C

ಶಿರಾ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಶಿರಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಶಿರಾ ಚುನಾವಣಾಧಿಕಾರಿ  ಡಾ.ನಂದಿನಿ ದೇವಿ ಅವರಿಗೆ ನಾಮಪತ್ರ ಸಲ್ಲಿಸುವ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್ ಹಾಜರಿದ್ದರು.

ಶಿರಾ ಗ್ರಾಮ ದೇವತೆ ದುರ್ಗಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅವರು ನಾಮಪತ್ರ ಸಲ್ಲಿಸಿದರು.

 ಮಧ್ಯಾಹ್ನ 12.1 ನಿಮಿಷಕ್ಕೆ ಚುನಾವಣಾಧಿಕಾರಿ ಕಚೇರಿ ಒಳಗೆ ತೆರಳುದ ಅವರು 12.27ಕ್ಕೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದರು.
ಈ ಅವಧಿ ಶುಭಗಳಿಗೆ ಎನ್ನುವ ಕಾರಣ ಜಯಚಂದ್ರ ನಾಮಪತ್ರ ಸಲ್ಲಿಸಿದರು.

ಕಳೆದ ವಿಧಾನಸಭೆ ಚುನಾವಣೆ  ವೇಳೆ ಜಯಚಂದ್ರ, ಅವರು ಅಂದುಕೊಂಡಿದ್ದ ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಆ ಸಮಯದಲ್ಲಿ ಮತ್ತೊಬ್ಬರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿತ್ತು. ಈ ಕಾರಣದಿಂದ  ಇಂದಿನ ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ.

ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮುಖಂಡರ ಜತೆ ಅ.15 ರಂದು ನಾಮಪತ್ರ ಸಲ್ಲಿಸುವರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು