ಗುರುವಾರ , ಆಗಸ್ಟ್ 11, 2022
23 °C
ಕಾಂಗ್ರೆಸ್ ಕಾರ್ಯಕರ್ತರ ಸಭೆ

ಶಿರಾ ಉಪಚುನಾವಣೆಗೆ ಹೆಚ್ಚು ಮಹತ್ವ: ಟಿ.ಬಿ.ಜಯಚಂದ್ರ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ಶಿರಾ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಬಹಳ ಮಹತ್ವದ್ದಾಗಿದೆ. ವಿಧಾನಸಭೆಗೆ ಹೋಗುವ ಶಕ್ತಿ ನೀಡಿದರೆ ರಾಜ್ಯದಲ್ಲಿ ಕ್ಷೇತ್ರದ ಘನತೆ ಮತ್ತು ಗೌರವವನ್ನು ಹೆಚ್ಚಿಸುವ ಕೆಲಸ ಮಾಡಲಾಗುವುದು ಎಂದು ಕಾಂಗ್ರೆಸ್‌ ಟಿ.ಬಿ.ಜಯಚಂದ್ರ ಮನವಿ ಮಾಡಿದರು.

ನಗರದಲ್ಲಿ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾರಣ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ದೃಷ್ಟಿಯಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜತೆ ಸೇರಿ ಸರ್ಕಾರದ ಭ್ರಷ್ಟಾಚಾರ ಹೊರಗೆ ತೆಗೆಯಲು ನಿಮ್ಮ ಆಶಿರ್ವಾದ ಬಹಳ ಮುಖ್ಯ ಎಂದರು.

ಮಾಜಿ ಶಾಸಕ ಆರ್.ನಾರಾಯಣ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣ, ಕೆಪಿಸಿಸಿ ವೀಕ್ಷಕ ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್, ಬರಗೂರು ನಟರಾಜು, ಎಸ್‌ಟಿ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಕೆಂಚಮಾರಯ್ಯ, ರೇಖಾ, ಎನ್.ಸಿ.ದೊಡ್ಡಯ್ಯ ಮಾತನಾಡಿದರು.

ಸಭೆಯಲ್ಲಿ ಕಾರ್ಯಕರ್ತರಿಂದ ಸಲಹೆ ಮತ್ತು ಸೂಚನೆಗಳನ್ನು ಸಂಗ್ರಹಿಸಲಾಯಿತು. ಕೆಪಿಸಿಸಿ ಸದಸ್ಯ ಸತ್ಯನಾರಾಯಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಯ್ಯ, ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಎಚ್.ಗುರುಮೂರ್ತಿ, ಮುಖಂಡರಾದ ಗುಳಿಗೇನಹಳ್ಳಿ ನಾಗರಾಜು, ಡಿ.ಸಿ.ಅಶೋಕ್, ಶಶಿಧರ್ ಗೌಡ, ಅರೇಹಳ್ಳಿ ರಮೇಶ್, ಹಲುಗುಂಡೇಗೌಡ, ದಿವಾಕರ್ ಗೌಡ, ವಾಜರಹಳ್ಳಿ ರಮೇಶ್, ಷಣ್ಮುಖಪ್ಪ, ಬಾಲೇನಹಳ್ಳಿ ಪ್ರಕಾಶ್, ಲಕ್ಷ್ಮಿದೇವಮ್ಮ, ಸರೋಜಮ್ಮ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು