ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ ವಿಧಾನಸಭೆ ಉಪಚುನಾವಣೆ; ಟಿ.ಬಿ.ಜಯಚಂದ್ರಗೆ ಟಿಕೆಟ್

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಸಭೆ
Last Updated 17 ಸೆಪ್ಟೆಂಬರ್ 2020, 4:33 IST
ಅಕ್ಷರ ಗಾತ್ರ

ಶಿರಾ: ಬೆಂಗಳೂರಿನಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ತುಮಕೂರು ಜಿಲ್ಲಾ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಶಿರಾ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಟಿ.ಬಿ.ಜಯಚಂದ್ರ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡಲು ತೀರ್ಮಾನಿಸಲಾಗಿದೆ.

ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಟಿ.ಬಿ.ಜಯಚಂದ್ರ ಅವರ ಹೆಸರನ್ನು ಸೂಚಿಸುವ ಮೂಲಕ ಪಕ್ಷದಲ್ಲಿದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

ಜಿಲ್ಲಾ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಚುನಾವಣೆಯಲ್ಲಿ ಟಿ.ಬಿ.ಜಯಚಂದ್ರ ಅವರನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವಂತೆ ಹೈಕಮಾಂಡ್ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.

‘ಚುನಾವಣೆ ಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಲಾ ಗುವುದು. ಶಾಸಕ ಡಾ.ಜಿ.ಪರಮೇಶ್ವರ ಹಾಗೂ ಕೆ.ಎನ್.ರಾಜಣ್ಣ ಅವರಿಗೆ ಚುನಾವಣೆ ಜವಾಬ್ದಾರಿ ನೀಡಲು ತೀರ್ಮಾನಿಸಿದ್ದು, ಇಂದಿನಿಂದಲೇ ಚುನಾವಣೆ ಪ್ರಚಾರ ನಡೆಸಿ’ ಎಂದು ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.

ಇದರಿಂದಾಗಿ ಟಿ.ಬಿ.ಜಯಚಂದ್ರ ಅವರಿಗೆ ಹಾದಿ ಸುಗಮವಾಗಿದೆ. ಚುನಾವಣೆಯಲ್ಲಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ಯಾವ ನಿಲುವು
ತೆಗೆದುಕೊಂಡು ಗೆಲುವಿಗೆ ಅಡ್ಡಿಯಾಗುತ್ತಾರೊ ಎನ್ನುವ ಆತಂಕ ಕಾರ್ಯಕರ್ತರಲ್ಲಿ ಮನೆ ಮಾಡಿತ್ತು. ಆದರೆ ಈಗ ಪರಮೇಶ್ವರ ಹಾಗೂ ರಾಜಣ್ಣ ಅವರಿಗೆ ಚುನಾವಣೆ ಜವಾಬ್ದಾರಿ ನೀಡಿರುವುದರಿಂದ ಕಾರ್ಯಕರ್ತರಲ್ಲಿ ಅನೆ ಬಲ ಬಂದಂತಾಗಿದೆ.

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಡಾ.ಜಿ.ಪರಮೇಶ್ವರ, ಕೆ.ಎನ್.ರಾಜಣ್ಣ, ಡಾ.ರಫೀಕ್ ಅಹಮದ್, ಷಡಕ್ಷರಿ, ಮಾಜಿ ಸಂಸದರಾದ ಮುದ್ದಹನುಮೇಗೌಡ, ಬಿ.ಎನ್.ಚಂದ್ರಪ್ಪ ಭಾಗವಹಿಸಿದ್ದರು.

ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ಟಿಕೆಟ್ ಗೊಂದಲ ಮುಂದುವರಿದಿದ್ದು, ಯಾರಿಗೆ ಟಿಕೇಟ್ ನೀಡುವರು ಎನ್ನುವ ಪ್ರಶ್ನೆ ಮೂಡಿದೆ. ಜತೆಗೆ ದಿನಕ್ಕೊಂದು ಹೆಸರು ತೇಲಿ ಬರುತ್ತಿರುವುದು ಕಾರ್ಯಕರ್ತರಲ್ಲಿ ಆತಂಕ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT