ಶಿರಾ: ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೃಷ್ಣಪ್ಪ (ಕಿಟ್ಟಪ್ಪಾಜಿ) ಅವಿರೋಧವಾಗಿ ಆಯ್ಕೆಯಾದರು.

ನಗರಸಭೆ ಸಭಾಂಗಣದಲ್ಲಿ ಸೋಮವಾರ ಅಧ್ಯಕ್ಷ ಜೀಷಾನ್ ಮಹಮೂದ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ರಚನೆ ಮಾಡಲಾಯಿತು.

ಕಾಂಗ್ರೆಸ್ ಪಕ್ಷದ 9ನೇ ವಾರ್ಡ್ ಸದಸ್ಯ ಕೃಷ್ಣಪ್ಪ (ಕಿಟ್ಟಪ್ಪಾಜಿ), 14ನೇ ವಾರ್ಡ್ ಸದಸ್ಯ ರಫೀವುಲ್ಲಾ, 28ನೇ ವಾರ್ಡ್ ಬಿಜೆಪಿ ಸದಸ್ಯೆ ಉಮಾ ವಿಜಯರಾಜು, ವಾರ್ಡ್ ನಂ 4ರ ಜೆಡಿಎಸ್ ಸದಸ್ಯೆ ತ್ರಿವೇಣಿ, ಹಾಗೂ ವಾರ್ಡ್ ನಂ 8ರ ಪಕ್ಷೇತರ ಸದಸ್ಯ ಎಸ್.ಎಲ್.ರಂಗನಾಥ್ ಅವರನ್ನು ಸದಸ್ಯರಾಗಿ ಆಯ್ಕೆ ಮಾಡಲಾಯಿತು ನಂತರ ಕೃಷ್ಣಪ್ಪ ಅವರನ್ನು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಕಾಮಗಾರಿ ಪೂರ್ಣಗೊಳಿಸಿ: ಅಮೃತ್ ಯೋಜನೆಯ ಕಾಮಗಾರಿ ಪೂರ್ಣಗೊಂಡ ನಂತರ ನೀರಿನ ವಾಲ್ಯೂಮೆಟ್ರಿಕ್ ಬಿಲ್ಲಿಂಗ್ ವ್ಯವಸ್ಥೆ ಜಾರಿಗೊಳಿಸಿ, ಮೇ ಅಂತ್ಯಕ್ಕೆ ಕಾಮಗಾರಿ ಮುಗಿಯಬೇಕು. ಇನ್ನು 20 ದಿನಗಳಲ್ಲಿ ಅಗೆದಿರುವ ರಸ್ತೆಗಳನ್ನು ಸರಿ ಪಡಿಸಲು ಸಾಧ್ಯವಿಲ್ಲ. ಆದ್ದರಿಂದ ಈಗಲೇ ಹಣ ವಸೂಲಿ ಮಾಡುವುದು ಬೇಡ ಎಂದು ಸದಸ್ಯ ಆರ್.ರಾಮು, ಉಮಾ ವಿಜಯರಾಜು, ಅಂಬುಜಾಕ್ಷಿ ನಟರಾಜು ಸಲಹೆ ನೀಡಿದರು.

ಜಲಮಂಡಳಿ ಎಂಜಿನಿಯರ್ ಮಿಥುನ್ ಮಾತನಾಡಿ, ಕಾಮಗಾರಿ ಪೂರ್ಣಗೊಳ್ಳುತ್ತಿದೆ. ಕಾಮಗಾರಿ ಪೂರ್ಣಗೊಂಡಿರುವ ಕಡೆ ನೀರಿನ ವಾಲ್ಯೂಮೆಟ್ರಿಕ್ ಬಿಲ್ಲಿಂಗ್ ವ್ಯವಸ್ಥೆ ಜಾರಿಗೊಳಿಸಲು ಅವಕಾಶ ನೀಡಿ, ಮೂರು ತಿಂಗಳಲ್ಲಿ ರಸ್ತೆ ರಿಪೇರಿ ಮಾಡಿ, ಕಾಮಗಾರಿ ಪೂರ್ಣಗೊಳಿಸಲಾಗುವುದು. ಇದರಿಂದ ನಗರಸಭೆಗೆ ಹೆಚ್ಚು ಆದಾಯ ಬರುವುದು ಜೊತೆಗೆ ಕಡಿಮೆ ನೀರು ಬಳಸುವವರಿಗೆ ಕಡಿಮೆ ಬಿಲ್ ಬರುವುದು ಎಂದರು.

ಇದಕ್ಕೆ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದಾಗ ಮಧ್ಯೆ ಪ್ರವೇಶಿಸಿದ ಶಾಸಕ ಟಿ.ಬಿ.ಜಯಚಂದ್ರ, ವಾರ್ಡ್ ಸದಸ್ಯರ ಸಮ್ಮುಖದಲ್ಲಿ ನೀರು ನೀಡಿ ಸಾಧಕ ಬಾಧಕಗಳನ್ನು ಅವರ ಗಮನಕ್ಕೆ ತಂದು ಕ್ರಮ ತೆಗೆದುಕೊಳ್ಳುವಂತೆ ಹೇಳಿದರು.

ಸ್ವಚ್ಛತೆ ಕಾಪಾಡಲು ನಗರಸಭೆ ವಿಫಲವಾಗಿದೆ. ಕಂದಾಯ ತಡವಾಗಿ ಕಟ್ಟಿದರೆ ದಂಡ ವಿಧಿಸಲಾಗುವುದು. ಸ್ವಚ್ಛತೆ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿ ಗಳಿಗೆ ದಂಡ ವಿಧಿಸುವಂತೆ ಸದಸ್ಯ ಎಸ್.ಎಲ್.ರಂಗನಾಥ್ ಸಲಹೆ ನೀಡಿದರು.

ಪೌರಾಯುಕ್ತ ರುದ್ರೇಶ್ ಮಾತನಾಡಿ, ನಗರಸಭೆ ಸಿಬ್ಬಂದಿ ಸ್ವಚ್ಛತೆ ಕಾಪಾಡಲು ಶಕ್ತಿ ನೀಡಿ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರಿಂದ ನಿರೀಕ್ಷಿತ ರೀತಿಯಲ್ಲಿ ಸಹಕಾರ ಬರುತ್ತಿಲ್ಲ. ರಸ್ತೆ ಬದಿಯಲ್ಲಿ ಸ್ವಚ್ಛ ಮಾಡಿದ ಸ್ವಲ್ಪ ಸಮಯಕ್ಕೆ ಕಸ ಎಸೆಯುತ್ತಿದ್ದಾರೆ. ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.

ನಗರಸಭೆ ಅಧ್ಯಕ್ಷ ಜೀಷಾನ್ ಮಹಮೂದ್, ಉಪಾಧ್ಯಕ್ಷ ಲಕ್ಷ್ಮಿಕಾಂತ್, ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-17-1134383089

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.