ಶನಿವಾರ, ಮೇ 28, 2022
31 °C

ಶಿರಾ ನಗರಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಾವಿನಿಂದ ಮತದಾನ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ: ನಗರಸಭೆ ವಾರ್ಡ್ ನಂ 21ರ ಕಾಂಗ್ರೆಸ್‌ ಅಭ್ಯರ್ಥಿ ಚಾಂದ್ ಪಾಷ (72) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದು, ಮತದಾನವನ್ನು ರದ್ದು ಪಡಿಸಲಾಗಿದೆ.

ಸೋಮವಾರ ಮತದಾನ ನಡೆಯಬೇಕಿತ್ತು. 21ನೇ ವಾರ್ಡ್ ಚುನಾವಣೆಯನ್ನು ಮಾತ್ರ ರದ್ದುಪಡಿಸಲಾಗಿದೆ. ಇತರೆ ವಾರ್ಡ್‌ಗಳ ಚುನಾವಣೆ ಎಂದಿನಂತೆ ನಡೆಯಲಿದೆ.

ಡಿ.27ರಂದು ನಡೆಯುವ ನಗರಸಭೆ ಚುನಾವಣೆಯಲ್ಲಿ 21ನೇ ವಾರ್ಡ್‌ನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ  ಚಾಂದ್ ಪಾಷ (72) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.

ಇವರು ಶಿರಾ ನಗರಸಭೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಜಾಮಿಯಾ ಮಸೀದಿ ಮುತ್ವಲ್ಲಿಯಾಗಿ ಸೇವೆ ಸಲ್ಲಿಸುತ್ತಿದ್ದರು. ನಟರಾಜ್ ಬೀಡಿ ಮಾಲೀಕರಾಗಿದ್ದು, ಆರ್.ರೆಹಾನ್ ಶಿಕ್ಷಣ ಸಂಸ್ಥೆಯ ಮೂಲಕ ಜನಪರ ಸೇವೆ ಮಾಡುತ್ತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು