ಶಿರಾ: ಸಿಪಿಆರ್ ಎನ್ನುವುದು ತುರ್ತು ಚಿಕಿತ್ಸೆಯಾಗಿದ್ದು, ಉಸಿರಾಟ ಅಥವಾ ಹೃದಯ ಬಡಿತ ನಿಂತಾಗ ಇದನ್ನು ಮಾಡುವುದರಿಂದ ವ್ಯಕ್ತಿಯ ಪ್ರಾಣ ಉಳಿಸಲು ಸಹಕಾರಿ. ಆಶಾ ಕಾರ್ಯಕರ್ತೆಯರಿಗೆ ಈ ಬಗ್ಗೆ ತರಬೇತಿ ನೀಡುತ್ತಿರುವುದು ಒಳ್ಳೆಯ ಕೆಲಸ ಎಂದು ತುಮುಲ್ ನಿರ್ದೇಶಕ ಎಸ್.ಆರ್.ಗೌಡ ಹೇಳಿದರು.

ನಗರದ ನಂದಿನಿ ಕ್ಷೀರ ಭವನದಲ್ಲಿ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನ ಸಂಸ್ಥೆ, ತುಮಕೂರು ಹಾಲು ಒಕ್ಕೂಟದಿಂದ ಆಶಾ ಕಾರ್ಯಕರ್ತೆಯರಿಗೆ ಹಮ್ಮಿಕೊಂಡಿದ್ದ ಸಿಪಿಆರ್ ತರಬೇತಿ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜೀವ ಉಳಿಸುವ ಸಮಯದಲ್ಲಿ ಯಾವ ರೀತಿ ಮಾಡಬೇಕು, ಸಮಸ್ಯೆಗಳನ್ನು ಹೇಗೆ ಬಗೆಹರಿಸಬೇಕು, ಯಾವ ಮಾನದಂಡಗಳ ಅಧಾರದ ಮೇಲೆ ನಿರ್ಧಾರ ಮಾಡಬಹುದು ಎನ್ನುವುದನ್ನು ಕಾರ್ಯಾಗಾರದಲ್ಲಿ ಆಶಾ ಕಾರ್ಯಕರ್ತರಿಗೆ ತಿಳಿಸಿಕೊಡಲಾಗಿದೆ ಎಂದರು.

ಶ್ರೀದೇವಿ ಸಂಸ್ಥೆ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್.ಪಾಟೀಲ್ ಮಾತನಾಡಿ, ವೈದ್ಯಕೀಯ ಲೋಕದಲ್ಲಿ ಹೊಸ-ಹೊಸ ಅವಿಷ್ಕಾರಗಳು ನಡೆಯುತ್ತಿವೆ. ಇಲ್ಲಿ ನಡೆಯುತ್ತಿರುವ ಕಾರ್ಯಾಗಾರದಲ್ಲಿ 300ಕ್ಕೂ ಹೆಚ್ಚು ಆಶಾ ಕಾರ್ಯಕರ್ತರು ಹೊಸ-ಹೊಸ ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸೂಕ್ತ ಸಲಹೆ ಪಡೆಯಬಹುದಾಗಿದೆ ಎಂದರು.

ಶಿರಾದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆಡಳಿತಾಧಿಕಾರಿ ಡಿ.ಎಂ.ಗೌಡ, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಬಾಬು ರಾಜೇಂದ್ರ ಪ್ರಸಾದ್, ಹಾಲು ಒಕ್ಕೂಟದ ವ್ಯವಸ್ಥಾಪಕ ಗಿರೀಶ್, ಮಂಜುನಾಥ್, ಪ್ರಕಾಶ್, ಆಶಾ ಮೆಂಟರ್ಗಳಾದ ಮಂಜುಳ, ಹೇಮ, ಶ್ರೀನಿವಾಸ್, ಶ್ರೀದೇವಿ ಆಸ್ಪತ್ರೆಯ ಆಪಘಾತ ಮತ್ತು ತುರ್ತು ಆರೈಕೆ ನಿರ್ದೇಶಕ ರಾಮ್ ಕೆ.ನಾಯರ್, ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ದೀಪಕ್, ಅಂಗರಚನಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಡಿ.ಯೋಗೀಶ್, ಆಸ್ಪತ್ರೆಯ ಸಿ.ಇ.ಒ ಪ್ರದೀಪ್ ವೆಗ್ಗಿ, ನರಸಪ್ಪ, ರಾಜೇಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-17-1336397003

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.