ಶಿರಾ: ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ಏನಾದರೂ ಹೆಸರು ಇಟ್ಟುಕೊಳ್ಳಲಿ ಅದರೆ ಅದರ ಮಹತ್ವವನ್ನು ಕೇಂದ್ರ ಸರ್ಕಾರ ಅರಿತು ಕೆಲಸ ಮಾಡಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ತಾಲ್ಲೂಕಿನ ಹುಯಿಲ್ ದೊರೆ ಗ್ರಾಮದಲ್ಲಿ ಬುಧವಾರ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಭಾಗಿತ್ವದ ಜಲಜೀವನ್ ಮನೆ ಮನೆ ಗಂಗೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದೆ ಯೋಜನೆಯನ್ನು ಹಳ್ಳ ಹಿಡಿಸಿದ್ದಾರೆ. ಈಗ ಉದ್ಯೋಗ ಖಾತ್ರಿ ಯೋಜನೆಯನ್ನು ಹಳ್ಳ ಹಿಡಿಸುವ ಕೆಲಸ ಮಾಡಲು ಹೊರಟಿದ್ದು ಈ ಬಗ್ಗೆ ಎಲ್ಲರೂ ಎಚ್ಚರ ವಹಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ₹5300 ಕೋಟಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದ್ದು ಇದುವರೆಗೂ ಅನುದಾನ ಬಿಡುಗಡೆಯಾಗಿಲ್ಲ. ಯೋಜನೆ ಜಾರಿಯಾದರೆ ಮಾತ್ರ ಶಿರಾ ಮತ್ತು ಚಿಕ್ಕನಾಯಕನಹಳ್ಳಿ ತಾಲ್ಲೂಕು ಅಭಿವೃದ್ಧಿಯಾಗುವುದು ಎಂದರು.

ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಾಡಿ, ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಬಂದ ಅನುದಾನದಲ್ಲಿ ಬುಕ್ಕಾಪಟ್ಟಣ ಹೋಬಳಿಗೆ ಹೆಚ್ಚು ಅನುದಾನ ನೀಡಲಾಗಿದೆ. ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಅರ್ಜಿ ಹಿಡಿದುಕೊಂಡು ಕೇಂದ್ರದ ಬಳಿ ಹೋಗದೆ ₹29 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಈಗ ಬಿಟ್ಟಿ ಭಾಗ್ಯಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಜನಪರ ಕಾಳಜಿ ಹೊಂದಿರುವ ಶಾಸಕ ಟಿ.ಬಿ.ಜಯಚಂದ್ರ ಅವರು ಇದರ ಬಗ್ಗೆ ಚಾಟಿ ಬೀಸಬೇಕು ಎಂದರು.

ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ತಾ.ಪಂ ಇಒ ಹರೀಶ್, ಗ್ರಾ.ಪಂ ಅಧ್ಯಕ್ಷೆ ರಾಜಮ್ಮ ಚಂದ್ರನಾಯ್ಕ, ಉಪಾಧ್ಯಕ್ಷೆ ಲಕ್ಷ್ಮಿ ತಿಮ್ಮಯ್ಯ, ಪಿಡಿಒ ಕನಕಪ್ಪ ಹನುಮಪ್ಪ ಮೇಲಸಕ್ರಿ, ಎಇಇ ರಾಜಣ್ಣ, ಮಂಜುಳಾಬಾಯಿ, ಶೇಷಾನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.