ಶಿರಾ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ ಮಕ್ಕಳನ್ನೇ ಸಮಾಜದಲ್ಲಿ ಉನ್ನತ ವ್ಯಕ್ತಿಯಾಗಿ ರೂಪಿಸಬೇಕೆಂಬ ಸಂಕಲ್ಪ ಪ್ರತಿಯೊಬ್ಬ ಪೋಷಕರಲ್ಲಿ ಹೆಚ್ಚಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ನಾರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಹೇಳಿದರು.

ತಾಲ್ಲೂಕಿನ ಪಟ್ಟನಾಯಕನಹಳ್ಳಿ ಶಾಂತಿನಿಕೇತನ ವಿದ್ಯಾಸಂಸ್ಥೆಯ ಬರಗೂರು ರಾಮಚಂದ್ರಪ್ಪ ಸಭಾಂಗಣದಲ್ಲಿ ಭಾನುವಾರ ಕನಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಘ ಹಮ್ಮಿಕೊಂಡಿದ್ದ ಗೌಡಗೆರೆ ಹೋಬಳಿ ಮಟ್ಟದ ಕುರುಬ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಉತ್ತಮ ಪ್ರತಿಭೆಯಿದ್ದು, ಇಂತಹ ಪ್ರತಿಭಾ ಪುರಸ್ಕಾರಗಳು ಮಕ್ಕಳ ಶೈಕ್ಷಣಿಕ ಉತ್ಸಾಹಕ್ಕೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದರು.

ನಗರಸಭೆ ಸದಸ್ಯ ಎಸ್.ಎಲ್.ರಂಗನಾಥ್ ಮಾತನಾಡಿ, ಶಿಕ್ಷಣ ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವನ್ನು ಉಜ್ವಲ ಗೊಳಿಸುತ್ತದೆ. ಹೆಚ್ಚು ಆಸಕ್ತಿ ವಹಿಸಿ ಕಲಿಯಬೇಕೆಂಬ ಉತ್ಸಾಹ ವಿದ್ಯಾರ್ಥಿಗಳಲ್ಲಿ ಹೆಚ್ಚಾದಾಗ ಸಾಧನೆ ಸುಲಭ ಎಂದರು.

ಕಸಾಪ ಅಧ್ಯಕ್ಷ ಬಿ.ಪಿ.ಪಾಂಡುರಂಗಯ್ಯ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳಾಗಬೇಕೆಂಬ ಕನಸು ಹೊತ್ತು ಮುನ್ನಡೆಯಬೇಕು ಎಂದರು.

ಪಿಯುಸಿ ಮತ್ತು ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಗೌಡಗೆರೆ ಹೋಬಳಿ ಕುರುಬ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಸಾಪ ಮಾಜಿ ಅಧ್ಯಕ್ಷ ನರೇಶ್ ಬಾಬು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎನ್.ಮಂಜುನಾಥ್, ನಗರಸಭೆ ಸದಸ್ಯ ಧ್ರುವಕುಮಾರ್, ಕನಕ ಬ್ಯಾಂಕ್ ವ್ಯವಸ್ಥಾಪಕ ಆರ್.ಲಕ್ಷ್ಮಣ್, ಹೆಂದೊರೆ ಗ್ರಾ.ಪಂ ಮಾಜಿ ಅಧ್ಯಕ್ಷೆ ಲಕ್ಷ್ಮಿದೇವಿ, ಹೊಸೂರು ಗ್ರಾ.ಪಂ ಅಧ್ಯಕ್ಷೆ ಎಚ್.ಲಕ್ಕಮ್ಮ ಮೈಲಪ್ಪ, ಅಶ್ವಥಯ್ಯ, ಪಾತಲಿಂಗಯ್ಯ, ದೊಡ್ಡರಾಜು, ಚಂದ್ರು, ಪಿ.ಎ.ಮಂಜುನಾಥ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.