ಶಿರಾ: ನಗರದ ಅಂಬೇಡ್ಕರ್ ಭವನದಲ್ಲಿ ಮಾರಕ್ಕ ಟೀಚರ್ ಸೇವಾ ಟ್ರಸ್ಟ್ ಉದ್ಘಾಟನೆ ಅಂಗವಾಗಿ ಪೌರ ಕಾರ್ಮಿಕರಿಗೆ ಉಚಿತ ಕಣ್ಣಿನ ತಪಾಸಣೆ, ಕನ್ನಡಕ ವಿತರಣೆ, ಮಧುಮೇಹ, ರಕ್ತದೊತ್ತದ ತಪಾಸಣೆ ಶಿಬಿರವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.

ನಗರಸಭೆ ಪೌರಾಯುಕ್ತ ಕೆ. ರುದ್ರೇಶ್ ಮಾತನಾಡಿ, ‘ಪೌರ ಕಾರ್ಮಿಕರು ಸಮಾಜದ ಬೆನ್ನೆಲುಬಾಗಿದ್ದು, ನಗರದ ಸ್ವಚ್ಛತೆ, ಆರೋಗ್ಯಕರ ವಾತಾವರಣಕ್ಕಾಗಿ ಅವರು ಹಗಲಿರುಳು ಎನ್ನದೆ ಶ್ರಮಿಸುತ್ತಿದ್ದಾರೆ’ ಎಂದು ಕೊಂಡಾಡಿದರು.

ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್ ಮಾತನಾಡಿ, ಮಾರಕ್ಕ ಅವರು ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯ ನಂತರವೂ ಸಮಾಜಮುಖಿ ಕಾರ್ಯ ಮಾಡುತ್ತಿದ್ದಾರೆ ಎಂದರು.

ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೃಷ್ಣಪ್ಪ,ಮಾರಕ್ಕ ಟೀಚರ್ ಸೇವಾ ಟ್ರಸ್ಟ್ ಅಧ್ಯಕ್ಷೆ ಮಾರಕ್ಕ, ಗೌರವಾಧ್ಯಕ್ಷ ಬಾಲಕೃಷ್ಣೇಗೌಡ, ಕಾರ್ಯದರ್ಶಿ ಮಂಜುಳ ಯುವರಾಜ್, ನಿವೃತ್ತ ಶಿಕ್ಷಕ ಈರೇಗೌಡ, ದೇವರಾಜು, ದಶರಥ, ಅರುಣ್ ಯಾದವ್, ಯುವರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-17-278907808

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.