ಶಿರಾ: ‘ದೇವಸ್ಥಾನಗಳು ಧರ್ಮ, ಸಂಸ್ಕೃತಿ ಹೆಸರಿನಲ್ಲಿ ಜನರನ್ನು ಒಗ್ಗೂಡಿಸುವ ಕೇಂದ್ರಗಳಾಗಿವೆ’ ಎಂದು ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು ಹೇಳಿದರು.

ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ಕೆಂಚಪ್ಪನಹಳ್ಳಿ ವಡ್ಡರಹಟ್ಟಿಯಲ್ಲಿ ಆಂಜನೇಯ ದೇವಸ್ಥಾನದ ಕಳಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇವಾಲಯಗಳು ಜನರನ್ನು ಏಕತೆಯತ್ತ ಕರೆದೊಯ್ಯುವ ಹಾಗೂ ಎಲ್ಲರಲ್ಲಿಯೂ ಭ್ರಾತೃತ್ವ ಜಾಗೃತಗೊಳಿಸುತ್ತವೆ. ಹಿಂದಿನ ಕಾಲದ ಜನರು ತಮ್ಮ ಹಗಲಿನ ವೇಳೆಯಲ್ಲಿ ನಿತ್ಯ ಕಾಯಕ ಮಾಡಿ ಸಂಜೆ ವೇಳೆಯಲ್ಲಿ ದೇವಸ್ಥಾನಗಳಲ್ಲಿ ಭಜನೆ, ಪೂಜೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಭಕ್ತಿ ಮತ್ತು ಶ್ರದ್ಧೆ ಕಡಿಮೆಯಾಗಿದೆ ಎಂದರು.

ಮುಖಂಡರಾದ ಶಾಂತಕುಮಾರ್ ಬಿ.ಜೆ., ಹನುಮಂತರಾಜು, ಕಂಚಿಗಾನಹಳ್ಳಿ ನಟರಾಜು, ಪುಟ್ಟಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-17-1261158626

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.