ಶಿರಾ: ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿರುವ ರಾಷ್ಟ್ರೀಯ ಹೆದ್ದಾರಿ- 48ರ ಕೆಳಸೇತುವೆ ಮಳೆಗಾಲದಲ್ಲಿ ನೀರು ತುಂಬಿ ಕೆಸರು ಗದ್ದೆಯಂತಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಕಷ್ಟ ಪಡುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ನಿರ್ಮಿಸಿರುವ ಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಮಳೆಗಾಲದಲ್ಲಿ ಇದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ.

ಮಳೆ ಬಂದಾಗ ಗ್ರಾಮದಲ್ಲಿನ ನೀರು ಸೇತುವೆಯ ಕೆಳಗೆ ಮತ್ತು ಪಕ್ಕದಲ್ಲಿ ನಿಂತು ಕೆರೆಯಂತಾಗುವುದು. ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡದ ಕಾರಣ ಸಮಸ್ಯೆ ಉಂಟಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ವಾಹನ ಸವಾರರಿಂದ ಟೋಲ್ ಪಡೆಯುವ ಇವರು ಸರಿಯಾದ ರೀತಿಯಲ್ಲಿ ಸರ್ವಿಸ್ ರಸ್ತೆ, ಕೆಳ ಸೇತುವೆಗಳನ್ನು ನಿರ್ವಹಣೆ ಮಾಡಲು ವಿಫಲರಾಗಿದ್ದಾರೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-17-570165850

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.