ಶಿರಾ: ತಾಲ್ಲೂಕಿನ ಜೋಡಿದೇವರಹಳ್ಳಿ ಗ್ರಾಮದಲ್ಲಿ ನಮ್ಮೂರ ಶಾಲೆ ಉಳಿಸುವಂತೆ ಒತ್ತಾಯಿಸಿ ಶನಿವಾರ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ ನಡೆಸಿದರು.

ಕರ್ನಾಟಕ ಪಬ್ಲಿಕ್ ಶಾಲೆ ಹೆಸರಿನಲ್ಲಿ 5 ಕಿ.ಮೀ ವ್ಯಾಪ್ತಿ ಒಳಗಿನ ಶಾಲೆಗಳನ್ನು ಮುಚ್ಚುಲು ಹೊರಟಿದ್ದು, ಈಗ ಜೋಡಿದೇವರಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಮುಚ್ಚಿ, ಬ್ರಹ್ಮಸಂದ್ರ ಶಾಲೆಗೆ ವಿಲೀನ ಮಾಡುವ ನೀತಿ ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.

ಗ್ರಾಮಸ್ಥ ಶ್ರೀನಿವಾಸಮೂರ್ತಿ ಮಾತನಾಡಿ, ಗ್ರಾಮದಲ್ಲಿರುವ ಸರ್ಕಾರಿ ಶಾಲೆಗಳನ್ನ ಮುಚ್ಚಿ ವಿಲೀನ ಮಾಡುವ ಕ್ರಮ ಸರಿಯಲ್ಲ. ಹಳ್ಳಿಗಾಡಿನಲ್ಲಿ ಇರುವ ಶಾಲೆಗಳಿಗೆ ಮಕ್ಕಳು ನೇರವಾಗಿ ಹೋಗಿ ಮನೆಗೆ ಬರುತ್ತಾರೆ ಈ ವ್ಯವಸ್ಥೆಯನ್ನು ಬದಲಾಯಿಸಿ ಕರ್ನಾಟಕ ಪಬ್ಲಿಕ್ ಶಾಲೆ ಹೆಸರಿನಲ್ಲಿ ಶಾಲೆಗಳನ್ನು ಮುಚ್ಚುವುದು ಖಂಡನೀಯ. ಇದರ ಬದಲು ಕೆಪಿಎಸ್ ಶಾಲೆಗಳಿಗೆ ನೀಡುವ ರೀತಿಯಲ್ಲಿ ನಮ್ಮ ಶಾಲೆಗಳಿಗೂ ಮೂಲಸೌಕರ್ಯ ಕೊಟ್ಟು ಒಳ್ಳೆಯ ಶಿಕ್ಷಣ ನೀಡುವಂತೆ ಒತ್ತಾಯಿಸಿದರು.

ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ಸರ್ಕಾರ ಗ್ರಾಮ ಪಂಚಾಯಿತಿಗೊಂದು ಮಾದರಿ ಸರ್ಕಾರಿ ಶಾಲೆ ಮಾಡುತ್ತೇವೆ ಎಂದು ಹೇಳಿ 40 ಸಾವಿರಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಈ ದೇಶದಲ್ಲಿ ಸಾವಿತ್ರಿಬಾಯಿ ಫುಲೆ, ಜ್ಯೋತಿರಾವ್ ಫುಲೆ, ವಿದ್ಯಾಸಾಗರ್ ಮತ್ತು ಹಲವು ಮಹಾನ್ ವ್ಯಕ್ತಿಗಳ ಹೋರಾಟದ ಶ್ರಮದಿಂದ ಶಿಕ್ಷಣ ದೊರೆಯುವಂತಾಗಿದೆ. ಪ್ರತಿಯೊಬ್ಬರಿಗೂ ಶಿಕ್ಷಣ ಹಕ್ಕು ಸಿಗಬೇಕು ಎನ್ನುವ ಇವರ ಅಶಯವನ್ನು ಇಂದು ಮಣ್ಣು ಪಾಲು ಮಾಡಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ. ಇದರ ವಿರುದ್ಧ ಎಲ್ಲರೂ ಒಂದಾಗಿ ಹೋರಾಟ ನಡೆಸಬೇಕು ಎಂದರು.

ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಭರತ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.