ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ಧಗಂಗಾ ಮಠಕ್ಕೆ ಭೇಟಿ
Last Updated 22 ಜನವರಿ 2022, 4:18 IST
ಅಕ್ಷರ ಗಾತ್ರ

ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ 3ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಶುಕ್ರವಾರ ಮಠದ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು.

ಪುಣ್ಯಸ್ಮರಣೆ ನಿಮಿತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದರು. ನಂತರ ದಾಸೋಹ ದಿನದ ಅಂಗವಾಗಿ ಮಠದ ಮಕ್ಕಳಿಗೆ ಊಟ ಬಡಿಸಿದರು.

ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ವಿವಿಧ ಹೂವು ಮತ್ತು ಹಣ್ಣುಗಳಿಂದ ವಿಶೇಷಾಲಂಕಾರ ಮಾಡಲಾಗಿತ್ತು. ಗದ್ದುಗೆಗೆ ಶುಕ್ರವಾರ ಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಯಿತು. ಕೋವಿಡ್‌ ಕಾರಣದಿಂದಾಗಿ ಸರಳವಾಗಿ ಪುಣ್ಯ ಸ್ಮರಣೆ ಕಾರ್ಯಕ್ರಮಗಳು ನಡೆದವು. ಮಠಕ್ಕೆ ಆಗಮಿಸಿದ್ದ ಭಕ್ತರು ಕೋವಿಡ್‌ ನಿಯಮ ಪಾಲಿಸಿ ಗದ್ದುಗೆಯ ದರ್ಶನ ಪಡೆದರು. ಹೆಚ್ಚಿನ ಜನ ಸಂದಣಿ ಮತ್ತು ಮಕ್ಕಳು ಸೇರಲು ಅವಕಾಶವಿರಲಿಲ್ಲ. ಪೊಲೀಸರು ಗದ್ದುಗೆಗೆ ಆಗಮಿಸುವ ಭಕ್ತರಿಗೆ ಮಾಸ್ಕ್‌ ಹಾಗೂ ವೈಯಕ್ತಿಕ ಅಂತರ ಕಾಪಾಡುವಂತೆ ಸೂಚಿಸುತ್ತಿರುವ ದೃಶ್ಯಗಳು ಕಂಡುಬಂದವು.

ಕೋವಿಡ್‌ ಮೂರನೇ ಅಲೆ ಹೆಚ್ಚುತ್ತಿರುವುದರಿಂದ ಮಠದ ಆವರಣದಲ್ಲಿ ಹೆಚ್ಚಿನ ಜನ ಸೇರುವುದಕ್ಕೆ ಯಾವುದೇ ಅವಕಾಶ ನೀಡಿರಲಿಲ್ಲ. ಮಠದಲ್ಲಿ ಯಾವುದೇ ರೀತಿಯ ಜಾತ್ರೆ, ಉತ್ಸವ, ವೇದಿಕೆ ಕಾರ್ಯಕ್ರಮ, ಸಮಾರಂಭಗಳಿಗೆ ಅವಕಾಶ ಕಲ್ಪಿಸಿರಲಿಲ್ಲ. ಹೀಗಾಗಿ ಮಠಕ್ಕೆ ಆಗಮಿಸುವ ಭಕ್ತರ ಸಂಖ್ಯೆಯೂ ತೀರಾ ವಿರಳವಾಗಿತ್ತು. ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್‌, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್‌, ಸಿ.ಎಂ.ರಾಜೇಶ್‌ಗೌಡ, ಮುಖಂಡರಾದ ಸೊಗಡು ಶಿವಣ್ಣ, ಸುರೇಶ್ ಗೌಡ ಮತ್ತು ಅಧಿಕಾರಿಗಳು ಸ್ವಾಮೀಜಿಯ ಗದ್ದುಗೆಯ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT