ಸಿದ್ಧಗಂಗಾ ಶ್ರೀ ಆರೋಗ್ಯ ಗಂಭೀರ: ಮಠದ ಆವರಣದಲ್ಲಿ ವಿದ್ಯಾರ್ಥಿಗಳಿಂದ ಪ್ರಾರ್ಥನೆ

7

ಸಿದ್ಧಗಂಗಾ ಶ್ರೀ ಆರೋಗ್ಯ ಗಂಭೀರ: ಮಠದ ಆವರಣದಲ್ಲಿ ವಿದ್ಯಾರ್ಥಿಗಳಿಂದ ಪ್ರಾರ್ಥನೆ

Published:
Updated:

ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಸ್ಥಿತಿ ಗಂಭೀರವಾಗಿರುವ ಕಾರಣ ಮಠದ ಆವರಣದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ.

ನಗರದ ವಿವಿಧ ಕಡೆಗಳಿಂದ ಮಠದತ್ತ ಭಕ್ತರು ಸಾಗುತ್ತಿದ್ದಾರೆ. ಅಲ್ಲದೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿ ಅವರ ಬಳಿ ಚರ್ಚಿಸಿ ಹೊರ ನಡೆದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಠಕ್ಕೆ ಬರುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಭಕ್ತರಲ್ಲಿ ಆತಂಕವನ್ನು ಮನೆ ಮಾಡಿದೆ.

ನಗರದ ಕಲ್ಯಾಣ ಮಂಟಪಗಳು ಹಾಗೂ ಹೋಟೆಲ್‌ಗಳಲ್ಲಿ ಕೊಠಡಿಗಳನ್ನು ಮುಂಗಡವಾಗಿ ಕಾಯ್ದಿರಿಸಲಾಗಿದೆ ಎನ್ನಲಾಗುತ್ತಿದೆ. ಈಗಾಗಲೇ ಎಲ್‌ಇಡಿ ಪರದೆಗಳನ್ನು ಮಠದ ಅಂಗಳಕ್ಕೆ ತರಲಾಗಿದೆ. 

ಬೆಂಗಳೂರಿನಿಂದ ನಗರದ ಒಳಗೆ ಪ್ರವೇಶಿಸುವ ಬಸ್‌ಗಳಿಗೆ ಬದಲಿ ಮಾರ್ಗ ಕಲ್ಪಿಸಬೇಕು ಎನ್ನುವ ಚಿಂತನೆಯೂ ಇದೆ. ಆದರೆ ಈ ಬಗ್ಗೆ ಪೊಲೀಸರು ಯಾವುದೇ ಮಾಹಿತಿಯನ್ನು ಅಧಿಕೃತವಾಗಿ ನೀಡುತ್ತಿಲ್ಲ. ಬೇರೆ ಬೇರೆ ಜಿಲ್ಲೆಗಳ ಪೊಲೀಸರು ಸಹ ನಗರಕ್ಕೆ ಬಂದಿದ್ದಾರೆ. ಮಠ ಹಾಗೂ ನಗರದ ಆಯಕಟ್ಟಿನ ಜಾಗಗಳಲ್ಲಿ ಪೊಲೀಸ್ ಪಹರೆ ಇದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !