ಶುಕ್ರವಾರ, ಜನವರಿ 17, 2020
21 °C

ಶಿವಕುಮಾರ ಶ್ರೀ 111 ಅಡಿ ಪ್ರತಿಮೆ; ಸಹಿ ಸಂಗ್ರಹ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ 111 ಅಡಿ ಎತ್ತರದ ಪ್ರತಿಮೆ ಸ್ಥಾಪಿಸುವಂತೆ ಒತ್ತಾಯಿಸಿ ಸೋಮವಾರ ನಗರದ ಎಪಿಎಂಸಿ ಆವರಣದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯಿತು.

ಕನ್ನಡ ಪರ ಸಂಘಟನೆಗಳ ಮುಖಂಡ ಧನಿಯಾಕುಮಾರ್ ಮಾತನಾಡಿ, ‘ಶಿವಕುಮಾರ ಸ್ವಾಮೀಜಿ ಅವರ 111 ಅಡಿ ಪ್ರತಿಮೆಯನ್ನು ನಗರದಲ್ಲಿ ಸ್ಥಾಪಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು. ಈ ನಿಟ್ಟಿನಲ್ಲಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಗುರು ಕಾರುಣ್ಯವನ್ನು ಶ್ರೀಗಳು ಇಲ್ಲಿಂದಲೇ ಪ್ರಾರಂಭಿಸುತ್ತಿದ್ದರು. ಆದ ಕಾರಣ ಎಪಿಎಂಸಿಯಿಂದ ಅಭಿಯಾನ ಪ್ರಾರಂಭಿಸಲಾಗಿದೆ. ನಗರದ ಎಲ್ಲೆಡೆ ಅಭಿಯಾನ ಹಮ್ಮಿಕೊಳ್ಳಲಾಗುವುದು’ ಎಂದರು.

ವರ್ತಕರು, ಹಮಾಲಿಗಳಿಂದ ಸಹಿ ಸಂಗ್ರಹಿಸಲಾಗುತ್ತಿದೆ. ನಗರದ ಎಲ್ಲ ವಾರ್ಡ್‍ಗಳಲ್ಲಿಯೂ ಶ್ರೀಗಳ ಭಕ್ತರು ಹಾಗೂ ಸಾರ್ವಜನಿಕರಿಂದ ಸಹಿ ಸಂಗ್ರಹಿಸಿ, ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಸಾಹಿತಿ ಕವಿತಾಕೃಷ್ಣ, ಶೀಘ್ರವಾಗಿ ಪ್ರತಿಮೆ ಸ್ಥಾಪಿಸುವ ನಿಟ್ಟಿನಲ್ಲಿ ಎಲ್ಲರು ಒತ್ತಡ ಹಾಕಬೇಕು. ಈ ಹಿನ್ನೆಲೆಯಲ್ಲಿ ಅಭಿಯಾನ ನಡೆಸಲಾಗುತ್ತಿದೆ ಎಂದರು.

ಕೋರಿ ಮಂಜುನಾಥ್, ಬಸವರಾಜು, ಮೋಹನ್ ಪಟೇಲ್, ಎಪಿಎಂಸಿ ಮಾಜಿ ಸದಸ್ಯ ಬಸವರಾಜು, ಚೇತನ್, ಅನಿಲ್, ಸುನೀಲ್ ಇದ್ದರು.

ಪ್ರತಿಕ್ರಿಯಿಸಿ (+)