ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ ನೀರಿಗೆ ಶಿವಣ್ಣ ಒತ್ತಾಯ

Published 23 ಏಪ್ರಿಲ್ 2024, 5:38 IST
Last Updated 23 ಏಪ್ರಿಲ್ 2024, 5:38 IST
ಅಕ್ಷರ ಗಾತ್ರ

ತುಮಕೂರು: ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ನೀರು ಹರಿಸಬೇಕು ಮಾಜಿ ಸಚಿವ ಸೊಗಡು ಶಿವಣ್ಣ ಇಲ್ಲಿ ಸೋಮವಾರ ಒತ್ತಾಯಿಸಿದರು.

ಭದ್ರಾ ಮೇಲ್ದಂಡೆ ಮುಖಾಂತರ ನಾಲ್ಕು ಜಿಲ್ಲೆಗಳಿಗೆ 29.90 ಟಿಎಂಸಿ ನೀರು ಪೂರೈಕೆ ಮಾಡಬಹುದು. ಚುನಾವಣೆ ಪ್ರಚಾರದ ವೇಳೆ ಜಿಲ್ಲೆಯ ಜನರು ನೀರಿಗಾಗಿ ಪರಿತಪಿಸುತ್ತಿರುವುದು ಕಂಡು ಬಂತು. ಕೇಂದ್ರ, ರಾಜ್ಯ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಬೇಕು. ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಮಧುಗಿರಿ ತಾಲ್ಲೂಕಿನ ದೊಡ್ಡೇರಿ, ಬಡವನಹಳ್ಳಿ, ಹೊಸಕೆರೆ ಭಾಗದ ಜನರು ಕುಡಿಯುವ ನೀರಿನ ಸಮಸ್ಯೆ ಅನುಭವಿಸುತ್ತಿದ್ದಾರೆ. ಅಡಿಕೆ, ತೆಂಗಿನ ತೋಟಗಳು ನೀರಿಲ್ಲದೆ ಒಣಗುತ್ತಿವೆ. ಸಮುದ್ರ ಸೇರುವ ಸಾವಿರಾರು ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ಸರ್ಕಾರ ವ್ಯವಸ್ಥಿತ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದರು.

2007-08ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 21,473.67 ಕೋಟಿ ಪರಿಷ್ಕೃತ ಯೋಜನಾ ವರದಿಗೆ ಅನುಮೋದನೆ ದೊರೆತಿದೆ. ಎರಡೂ ಸರ್ಕಾರಗಳು ಇಚ್ಛಾಶಕ್ತಿ ತೋರಿಸಿ ಯೋಜನೆ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬೇಕು. ಈ ಯೋಜನೆಯ ಮೂಲಕ ನಾಲ್ಕು ಜಿಲ್ಲೆಗಳ 2,25,515 ಹೆಕ್ಟೇರ್‌ ಭೂ ಪ್ರದೇಶಕ್ಕೆ ನೀರಾವರಿ ಸೌಲಭ್ಯ, 367 ಕೆರೆಗಳಿಗೆ ಶೇ 50ರಷ್ಟು ನೀರು ತುಂಬಿಸಬಹುದು. ವಾಣಿ ವಿಲಾಸ ಜಲಾಶಯಕ್ಕೆ 2 ಟಿಎಂಸಿ ನೀರು ಹರಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಮುಖಂಡರಾದ ಕೆ.ಪಿ.ಮಹೇಶ್, ಪ್ರಭಾಕರ್, ಹರೀಶ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT