ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಮ್ಮ ಪ್ರೀತಿಗೆ ಬೆಲೆಯೇ ಇಲ್ಲ’

Last Updated 13 ಆಗಸ್ಟ್ 2020, 15:58 IST
ಅಕ್ಷರ ಗಾತ್ರ

ತುಮಕೂರು: ‘ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜೆ.ಹಳ್ಳಿಗಳಲ್ಲಿ ನಡೆದ ಗಲಾಟೆಗಳಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು. ನಾವು ಕಳೆದ 70 ವರ್ಷಗಳಿಂದಲೂ ಮುಸ್ಲಿಂ ಸಮುದಾಯವನ್ನು ಪ್ರೀತಿಯಿಂದ ಕಾಣುತ್ತಿದ್ದೇವೆ. ಆದರೆ ಅವರು ತಮ್ಮ ಚಾಳಿ ಬಿಡುತ್ತಿಲ್ಲ. ಹಾಗಿದ್ದರೆ ನಮ್ಮ ಪ್ರೀತಿಗೆ ಬೆಲೆ ಇಲ್ಲವೆ’ ಎಂದು ಬಿಜೆಪಿ ಮುಖಂಡ ಸೊಗಡು ಶಿವಣ್ಣ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಾಂಗ್ರೆಸ್‌ನವರು ಮತ ಬ್ಯಾಂಕ್ ರಾಜಕಾರಣಕ್ಕೆ ಗಲಭೆಕೋರರ ಬೆಂಬಲಕ್ಕೆ ನಿಂತಿದ್ದಾರೆ. ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳನ್ನು ಸರ್ಕಾರ ನಿಷೇಧಿಸಬೇಕು. ಈ ಎರಡೂ ಸಂಘಟನೆಗಳನ್ನು ಬೆಳೆಸಿದ್ದೇ ಕಾಂಗ್ರೆಸ್’ ಎಂದು ದೂರಿದರು.

ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಿ ಮತ್ತು ನಾಗರಿಕರ ಆಸ್ತಿಗಳಿಗೆ ನಷ್ಟ ಉಂಟು ಮಾಡಿರುವುದು ಅಕ್ಷಮ್ಯ. ದೇಶದ ಒಳಗೆ ಎಲ್ಲ ಕಡೆಯೂ ವಿವಿಧ ರೀತಿಯಲ್ಲಿ ಭಯೋತ್ಪಾದನಾ ಕೃತ್ಯಗಳಲ್ಲಿ ಈ ಸಮುದಾಯ ತೊಡಗಿದೆ. ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಘಟನೆಗಳನ್ನು ನೋಡಿದರೆ ನಾವು ಪಾಕಿಸ್ತಾನದಲ್ಲಿ ಇದ್ದೇವೆಯೇ ಎನಿಸುತ್ತದೆ ಎಂದು ಹೇಳಿದರು.

‘ನಾವು ರೈತಾಪಿ ಜನರು. ನಮ್ಮ ಮನೆಗಳಲ್ಲಿ ಯಾವುದೇ ಪೆಟ್ರೋಲ್ ಬಾಂಬ್, ಮಚ್ಚು, ಲಾಂಗ್‌ಗಳು ಇಲ್ಲ. ಆದರೆ ಇಂತಹ ಶಸ್ತ್ರಗಳು ಇವರ ಮನೆಯಲ್ಲಿವೆ. ಇಂತಹವರನ್ನು ಪತ್ತೆ ಮಾಡಿ ಎನ್‌ಕೌಂಟರ್ ಮಾಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT