ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಧಗಂಗೆಯಲ್ಲಿ ಕೃಷಿ, ಕೈಗಾರಿಕಾ ವಸ್ತು ಪ್ರದರ್ಶನ

ಫೆ. 12ರಿಂದ ಫೆ.26ರವರೆಗೆ ಪ್ರದರ್ಶನ, ಪ್ರತಿದಿನವೂ ಸಾಂಸ್ಕೃತಿಕ ಕಾರ್ಯಕ್ರಮ
Last Updated 8 ಫೆಬ್ರುವರಿ 2020, 14:17 IST
ಅಕ್ಷರ ಗಾತ್ರ

ತುಮಕೂರು: ಸಿದ್ಧಗಂಗಾ ಮಠದಲ್ಲಿ ಫೆ.12ರಿಂದ ಫೆ.26ರವರೆಗೆ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಆಯೋಜಿಸಲಾಗಿದೆ ಎಂದು ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಟ್ರಸ್ಟ್‌ ಜಂಟಿ ಕಾರ್ಯದರ್ಶಿ ಎಸ್.ಶಿವಕುಮಾರ್ ತಿಳಿಸಿದರು.

ಪ್ರತಿ ವರ್ಷವೂ ಮಠದಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲಾಗುತ್ತಿದೆ. ಈ ಪ್ರದರ್ಶನ ರಾಜ್ಯದಲ್ಲಿ ಪ್ರತಿಷ್ಠಿತವಾಗಿದೆ. ಈ ಪ್ರದರ್ಶನ ರೈತರಿಗೆ, ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಪ್ರದರ್ಶನಕ್ಕಾಗಿ ಕಳೆದ ಆರು ತಿಂಗಳಿಂದಲೇ ತಯಾರಿ ಮಾಡಲಾಗಿದೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕೈಗಾರಿಕಾ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯುಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಅನುದಾನ ನೀಡುತ್ತಿವೆ. ಆದರೆ ಕಳೆದ ವರ್ಷ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನುದಾನ ನೀಡಿಲ್ಲ. ಈ ಬಾರಿ ಪ್ರಸ್ತಾವ ಸಲ್ಲಿಸಲಾಗಿದ್ದು, ಅನುದಾನ ಬಿಡುಗಡೆ ಆಗುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ರಂಗಭೂಮಿ, ವೃತ್ತಿ, ಹವ್ಯಾಸ ಕಲಾವಿದರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಕಲಾವಿದರ ಪ್ರತಿಭೆ ಗುರುತಿಸುವ ಕೆಲಸವನ್ನು ಮಠದಲ್ಲಿ ಪ್ರತಿ ವರ್ಷ ಮಾಡಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಮಠದಲ್ಲಿಯೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಟ್ರಸ್ಟ್‌ ಕಾರ್ಯಕಾರಿ ಸಮಿತಿ ಕಾರ್ಯದರ್ಶಿ ಬಿ.ಗಂಗಾಧರಯ್ಯ, ವರ್ಷದಿಂದ ವರ್ಷಕ್ಕೆ ವಸ್ತು ಪ್ರದರ್ಶನಕ್ಕೆ ಭೇಟಿ ನೀಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈಗ ನಡೆಸುತ್ತಿರುವ ಜಾಗ ಕಡಿಮೆಯಾಗುತ್ತಿದ್ದು, ಎಲ್ಲರ ಸಹಕಾರದಿಂದ ವಸ್ತು ಪ್ರದರ್ಶನ ಯಶಸ್ವಿಯಾಗುತ್ತಿದೆ. ವರ್ಷದಿಂದ ವರ್ಷಕ್ಕೆ ವಸ್ತು ಪ್ರದರ್ಶನ ಉತ್ತಮಗೊಳಿಸಲಾಗುತ್ತಿದೆ ಎಂದರು.

ಜಂಟಿ ಕಾರ್ಯದರ್ಶಿ ಕೆಂ.ಬ.ರೇಣುಕಯ್ಯ, ವಸ್ತು ಪ್ರದರ್ಶನದಲ್ಲಿ 14 ದಿನವೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಪೌರಾಣಿಕ, ಸಾಮಾಜಿಕ, ಐತಿಹಾಸಿಕ, ರಸ ಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT