ಸೋಮವಾರ, ಆಗಸ್ಟ್ 15, 2022
22 °C

ಸಿದ್ಧಗಂಗಾ ಮಠದ ಕೊಟ್ಟಿಗೆಗೆ ಚಿರತೆ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಸಿದ್ಧಗಂಗಾ ಮಠದ ದನದ ಕೊಟ್ಟಿಗೆಗೆ ಬುಧವಾರ ರಾತ್ರಿ ಚಿರತೆ ನುಗ್ಗಿದ್ದು ಎರಡು ಜಾನುವಾರು ಬಲಿ ತೆಗೆದುಕೊಂಡಿದೆ. ಇದರಲ್ಲಿ ಒಂದು ಕರು ಸಹ ಸೇರಿದೆ.

ಮಠದ ಸಮೀಪದ ಬೆಟ್ಟಗುಡ್ಡಗಳಿಂದ ಚಿರತೆ ಬಂದಿದೆ. ಜಾನುವಾರುಗಳ ವರ್ತನೆ ಕಂಡು ಸ್ಥಳಕ್ಕೆ ಮಠದ ಸಿಬ್ಬಂದಿ ದೌಡಾಯಿಸಿದ್ದಾರೆ. ಸಿಬ್ಬಂದಿಯನ್ನು ಕಂಡ ತಕ್ಷಣ ಚಿರತೆ ಪರಾರಿಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದರು. ಚಿರತೆ ಸೆರೆಗೆ ಮಠದ ಸಮೀಪ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.