ಶುಕ್ರವಾರ, ಜನವರಿ 17, 2020
22 °C

ಮಠದಲ್ಲಿ ಸಂವಾದ ಆಯೋಜಿಸಿರಲಿಲ್ಲ: ಸಿದ್ಧಲಿಂಗ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: 'ಪ್ರಧಾನಿ ನರೇಂದ್ರ ಮೋದಿ ಮಠದ ಮಕ್ಕಳೊಂದಿಗೆ ಸಂವಾದ ನಡೆಸಬೇಕಿತ್ತು, ಆದರೆ ನಡೆಸಲಿಲ್ಲ ಎಂದು ತಪ್ಪು ಸಂದೇಶ ಪ್ರಸಾರವಾಗಿದೆ. ಆದರೆ ಪ್ರಧಾನಿ ಕಾರ್ಯಕ್ರಮದ ಪಟ್ಟಿಯಲ್ಲಾಗಲಿ, ಮಠದ ವತಿಯಿಂದಾಗಲಿ ಸಂವಾದ ಆಯೋಜಿಸಿರಲಿಲ್ಲ' ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಸ್ಪಷ್ಟಪಡಿಸಿದರು.

ಶುಕ್ರವಾರ ತಮ್ಮನ್ನು ಭೇಟಿ ಮಾಡಿದ ವರದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, 'ಗುರುವಾರ ಮಠದಲ್ಲಿ ನಡೆದ ಮೋದಿ ಕಾರ್ಯಕ್ರಮ ಯಶಸ್ವಿಯಾಗಿದೆ. ಪ್ರಧಾನಿಯವರೇ ಸ್ವಪ್ರೇರಣೆಯಿಂದ ಬಂದು ಪೂಜ್ಯರ ಗದ್ದುಗೆ ದರ್ಶನ ಪಡೆದಿದ್ದಾರೆ' ಎಂದರು.

'ಮಕ್ಕಳಿಗೆ ಉಪಯುಕ್ತವಾಗುವ ರೀತಿಯಲ್ಲಿ ಪಾಸ್ಟಿಕ್ ನಿಷೇಧ, ಬಯಲು ಶೌಚಾಲಯ ಮುಕ್ತ ಕನಸು, ಜಲಸಂರಕ್ಷಣೆ ಕುರಿತು ಪ್ರಧಾನಿ ಮಾತನಾಡಿದ್ದಾರೆ. ಜತೆಗೆ ನಾಡಿನ ಸಂತರು ಮೂರು ಸಂಕಲ್ಪ ತೊಟ್ಟು ದೇಶದ ಬದಲಾವಣೆಗೆ ಶ್ರಮಿಶಬೇಕು ಎಂದು ಕರೆ ಕೊಟ್ಟಿದ್ದಾರೆ' ಎಂದರು.

'ಪ್ರಧಾನಿಗೆ ಸಮಯದ ಅಭಾವ ಇತ್ತು. ಹಾಗಾಗಿ ಚುಟುಕಾಗಿ ಮಾತನಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೂಡ ಮಾತನಾಡುವವರಿದ್ದರು. ಸಮಯದ ಅಭಾವದಿಂದ ಸಾಧ್ಯವಾಗಲಿಲ್ಲ' ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು