ತುಮಕೂರು: ಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ಧಗಂಗಾ ಮಠದಲ್ಲಿ ಸೋಮವಾರ ಜರುಗಿದ ಸಿದ್ಧಲಿಂಗೇಶ್ವರ ಸ್ವಾಮಿ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡು, ಭಕ್ತಿ ಸಮರ್ಪಿಸಿದರು.

ಸೋಮವಾರ ಬೆಳಿಗ್ಗೆ 11.30ರ ವೇಳೆಗೆ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಕಿರಿಯ ಸ್ವಾಮೀಜಿ ಶಿವಸಿದ್ಧೇಶ್ವರ ಸ್ವಾಮೀಜಿ ನೆರವಾದರು. ರಥದ ಗಾಲಿಗೆ ತೆಂಗಿನ ಕಾಯಿ ಒಡೆದು, ಸ್ವಾಮಿಗೆ ಪುಷ್ಪಾರ್ಚನೆ ಸಲ್ಲಿಸಿದ ನಂತರ ರಥೋತ್ಸವ ವಿಧ್ಯುಕ್ತ ಚಾಲನೆ ಪಡೆದುಕೊಂಡಿತು.

ನಾಡಿನ ವಿವಿಧೆಡೆಗಳಿಂದ ಬಂದಿದ್ದ ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು. ತಮ್ಮ ಸ್ವಾಮಿಯನ್ನು ಕಣ್ತುಂಬಿಕೊಂಡು, ಭಕ್ತಿ– ಭಾವಪರವಶರಾದರು. ಕೈ ಮುಗಿದು, ಕಾಯಿ ಒಡೆದು, ಬಾಳೆ ಹಣ್ಣು, ಹೂವು, ದವನ ಸಮರ್ಪಿಸಿ ಕೃತಾರ್ಥರಾದರು. ನವ ಜೋಡಿಗಳು ದವನ ಎಸೆದು, ಹರಕೆ ತೀರಿಸಿ, ತಮ್ಮ ಇಷ್ಟಾರ್ಥ ಸಿದ್ಧಿಸುವಂತೆ ಬೇಡಿಕೊಂಡರು.

ಸಿದ್ಧಲಿಂಗೇಶ್ವರ ಸ್ವಾಮಿ ಹಾಗೂ ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಸ್ಮರಣೆಗಳು ಮೊಳಗಿದವು. ಅಕ್ಷರ ಕಲಿಸಿ, ಅನ್ನ, ಆಶ್ರಯ ನೀಡಿ ಪೋಷಿಸಿದ ಗುರುವನ್ನು ನೆನಪು ಮಾಡಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.