ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಧಗಂಗಾ ಮಠ: ಶಿವಕುಮಾರ ಸ್ವಾಮೀಜಿ 5ನೇ ಪುಣ್ಯ ಸ್ಮರಣೆ

ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
Published 21 ಜನವರಿ 2024, 5:32 IST
Last Updated 21 ಜನವರಿ 2024, 5:32 IST
ಅಕ್ಷರ ಗಾತ್ರ

ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 5ನೇ ಪುಣ್ಯ ಸ್ಮರಣೆಯ ಪ್ರಯುಕ್ತ ನಗರದ ಸಿದ್ಧಗಂಗಾ ಮಠದಲ್ಲಿ ಭಾನುವಾರ ಬೆಳಗಿನ ಜಾವದಿಂದ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು.

ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಯ ನೇತೃತ್ವದಲ್ಲಿ ರುದ್ರಾಭಿಷೇಕ, ಶಿವಕುಮಾರ ಸ್ವಾಮೀಜಿಯ ಗದ್ದುಗೆ ಪೂಜೆ ನೆರವೇರಿತು. ನಂತರ ಗದ್ದುಗೆಯಿಂದ ಬಸವೇಶ್ವರ ಬಡಾವಣೆಯ ವರೆಗೆ ಶಿವಕುಮಾರ ಸ್ವಾಮೀಜಿಯ ವಿಗ್ರಹದ ಮೆರವಣಿಗೆ ನಡೆಯಿತು. ವಿವಿಧ ಮಠಗಳ ಸ್ವಾಮೀಜಿಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಮಠಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸರತಿ ಸಾಲಿನಲ್ಲಿ ನಿಂತುಕೊಂಡು ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಠದಲ್ಲಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಮಠಕ್ಕೆ ಆಗಮಿಸುವ ಎಲ್ಲರಿಗೂ ದಾಸೋಹದ ವ್ಯವಸ್ಥೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಶಿವಕುಮಾರ ಸ್ವಾಮೀಜಿಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಮಠದ ಆವರಣದಲ್ಲಿ ಅರಣ್ಯ ಇಲಾಖೆಯಿಂದ ನಿರ್ಮಿಸಿರುವ ‘ಸ್ಮೃತಿ ವನ’ ಉದ್ಘಾಟಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT