ತುಮಕೂರು: ‘ಮುಖ್ಯಮಂತ್ರಿಯಾಗಿ ದೇವರಾಜ ಅರಸು ಸಾಧನೆಯನ್ನು ಸರಿಗಟ್ಟಿದ್ದಾಗಿ ಹೇಳುತ್ತಿರುವ ಸಿದ್ದರಾಮಯ್ಯ ಅವರು ರಾಜಕೀಯವಾಗಿ ಹಿಂದುಳಿದ ವರ್ಗದ ಯಾವೊಬ್ಬ ನಾಯಕನನ್ನಾದರೂ ಬೆಳೆಸಿದ್ದಾರೆಯೇ’ ಎಂದು ಗ್ರಾಮಾಂತರ ಶಾಸಕ ಬಿ.ಸುರೇಶ್ಗೌಡ ಇಲ್ಲಿ ಬುಧವಾರ ಪ್ರಶ್ನಿಸಿದರು.

‘ಸಿದ್ದರಾಮಯ್ಯ ಒಡೆದಾಳುವ ನೀತಿಯನ್ನು ಅನುಸರಿಸಿಕೊಂಡು ಬಂದಿದ್ದಾರೆ. ಸ್ವಾರ್ಥ ರಾಜಕಾರಣಿ. ವ್ಯಕ್ತಿ ಕೇಂದ್ರಿತ ರಾಜಕಾರಣ ಮಾಡಿದ್ದನ್ನು ಹೊರತುಪಡಿಸಿದರೆ ಜನ ಕೇಂದ್ರಿತ ರಾಜಕಾರಣ ಮಾಡಲಿಲ್ಲ. ಸಿದ್ದರಾಮಯ್ಯ ನಂತರ ಹಿಂದುಳಿದ ವರ್ಗದ ನಾಯಕ ಯಾರು ಎಂಬುದಕ್ಕೆ ಉತ್ತರ ಇಲ್ಲವಾಗಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ದೇವರಾಜ ಅರಸು ಪಕ್ಷದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯಿಲಿ, ಧರ್ಮಸಿಂಗ್ ಸೇರಿದಂತೆ ಹಲವು ನಾಯಕರನ್ನು ಬೆಳೆಸಿದ್ದಾರೆ. ಸಿದ್ದರಾಮಯ್ಯ ಯಾವ ನಾಯಕರನ್ನು ಬೆಳೆಸಿದ್ದಾರೆ. ಒಮ್ಮೆಯೂ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿ ಆಗಲಿಲ್ಲ. ಕೆಪಿಸಿಸಿ ಅಧ್ಯಕ್ಷರಾಗಿದ್ದ ದಲಿತ ಸಮುದಾಯದ ಜಿ.ಪರಮೇಶ್ವರ ಮುಖ್ಯಮಂತ್ರಿ ಆಗುತ್ತಾರೆ ಎಂಬ ಕಾರಣಕ್ಕೆ ಕುತಂತ್ರ ನಡೆಸಿ ಸೋಲಿಸಿದರು. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತಂದ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಮಾಡಿಕೊಡಲಿಲ್ಲ. ಇದು ಯಾವ ನೈತಿಕ ರಾಜಕಾರಣ’ ಎಂದು ಕೇಳಿದರು.

ಸಿದ್ದರಾಮಯ್ಯ ಅವರ ನಾಯಕರಾಗಿದ್ದ ರಾಮಕೃಷ್ಣ ಹೆಗಡೆ ಮಾಡಿದ ಒಂದು ಕೆಲವನ್ನೂ ಮಾಡಲಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ತಂದರು. ಭೂಸುಧಾರಣೆ ಕಾಯ್ದೆ ಜಾರಿಗೊಳಿಸಿದರು. ಭ್ರಷ್ಟಾಚಾರ ತಡೆಗೆ ಲೋಕಾಯುಕ್ತಕ್ಕೆ ಶಕ್ತಿ ತುಂಬಿದರು. ಮೌಲ್ಯಾಧಾರಿತ ರಾಜಕಾರಣ ಮಾಡಿದರು. ತಮ್ಮ ವಿರುದ್ಧ ಸಣ್ಣ ಆರೋಪ ಬಂದರೂ ಅಧಿಕಾರಕ್ಕೆ ಅಂಟಿಕೊಳ್ಳದೆ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಅಂತಹ ಒಂದು ಕೆಲಸವನ್ನೂ ಮಾಡಿಲ್ಲ. ಮೂಡಾ ಹಗರಣ ಸೇರಿದಂತೆ ಸಾಲು ಸಾಲು ಹಗರಣ ಮಾಡಿದ್ದಾರೆ. ರಾಜ್ಯ ಕಂಡ ಅತ್ಯಂತ ಭ್ರಷ್ಟ ಸರ್ಕಾರ ನೀಡಿದ್ದಾರೆ. ಹೆಗಡೆ ಜಾರಿಗೆ ತಂದಿದ್ದ ಲೋಕಾಯುಕ್ತವನ್ನೇ ಮುಚ್ಚಿಸಿದ್ದರು ಎಂದು ಆರೋಪಿಸಿದರು.

‘ಸ್ವಾರ್ಥ ರಾಜಕಾರಣ ಮಾಡಿದ್ದೇ ಈವರೆಗಿನ ಸಾಧನೆ. ರಾಜಕಾರಣ ಇರುವುದು ಸಿದ್ದರಾಮಯ್ಯ ಅವರಿಂದ, ಸಿದ್ದರಾಮಯ್ಯ ಅವರದ್ದು, ಸಿದ್ದರಾಮಯ್ಯ ಅವರಿಗಾಗಿ ಎಂದು ತಿಳಿದುಕೊಂಡಿದ್ದಾರೆ. ಅದರಂತೆ ನಡೆದುಕೊಂಡಿದ್ದಾರೆ. ಮುಖ್ಯಮಂತ್ರಿಯಾಗಿ ಹೆಚ್ಚು ದಿನ ಅಧಿಕಾರ ನಡೆಸಿದ ಸಾಧನೆ ಮಾಡಿದ್ದಾರೆ. ದಾಖಲೆಯಲ್ಲಿ ಉಳಿಯುವಂತಹ ಕೆಲಸ ಮಾಡಿದ ಸಾಧನೆಗಳಿಲ್ಲ’ ಎಂದು ದೂರಿದರು.

ಮುಖಂಡರಾದ ಗೂಳೂರು ಶಿವಕುಮಾರ್, ನರಸಿಂಹಮೂರ್ತಿ, ವಿಜಿ ಕುಮಾರ್, ವೆಂಕಟೇಶ್, ಓಂನಮೋ ನಾರಾಯಣ, ಪ್ರಭಾಕರ, ಸ್ವಾಮಿ, ಶಿವರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.