ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಸಿದ್ದರಾಮಯ್ಯ ತಳ ಸಮುದಾಯದ ನಾಯಕನಾಗಲಿ: ಈಶ್ವರಾನಂದಪುರಿ ಸ್ವಾಮೀಜಿ

ಕನಕಗುರು ಪೀಠದ ಈಶ್ವರಾನಂದಪುರಿ ಸ್ವಾಮೀಜಿ ಆಶಯ
Published 24 ಸೆಪ್ಟೆಂಬರ್ 2023, 14:18 IST
Last Updated 24 ಸೆಪ್ಟೆಂಬರ್ 2023, 14:18 IST
ಅಕ್ಷರ ಗಾತ್ರ

ಚೇಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಕುರುಬ ಸಮುದಾಯಕ್ಕೆ ಸೀಮಿತವಾಗದೆ, ತಳಮಟ್ಟದ ಎಲ್ಲ ಸಮುದಾಯಕ್ಕೂ ನಾಯಕರಾದಾಗ ಮಾತ್ರ ನಮ್ಮ ಸಮುದಾಯಕ್ಕೆ ಹೆಮ್ಮೆ’ ಎಂದು ಕನಕಗುರು ಪೀಠದ ಈಶ್ವರಾನಂದಪುರಿ ಸ್ವಾಮೀಜಿ ಅಭಿಪ್ರಾಯಪಟ್ಟರು.

ಗ್ರಾಮದ ಶ್ರವಣ್ ಪಟೇಲ್ ಕಲ್ಯಾಣ ಮಂಟಪದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆ ಹಾಗೂ ತಾಲ್ಲೂಕು ಕುರುಬರ ಸಂಘದಿಂದ ಶಾಸಕರಿಗೆ, ಜನಪ್ರತಿನಿಧಿಗಳಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಶೈಕ್ಷಣಿಕವಾಗಿ ಕುರುಬರ ಸಮಾಜ ಅಭಿವೃದ್ಧಿಯಾಗಬೇಕಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಹೆಸರಿನಲ್ಲಿ ಹಾಗೂ ಕುರುಬರ ಸಹಕಾರದಿಂದ 150ಕ್ಕೂ ಹೆಚ್ಚು ಶಾಸಕರು ಗೆದ್ದಿದ್ದಾರೆ. ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಸಹಕಾರವನ್ನು ಕೆಲವು ಶಾಸಕರು ನೀಡುತ್ತಿಲ್ಲ. ಸಿದ್ದರಾಮಯ್ಯ ಅವರ ಯೋಜನೆಗಳು ವಿಶೇಷವಾಗಿದ್ದು ಅದರಲ್ಲೂ ಮಹಿಳೆಯರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿದೆ ಎಂದು ತಿಳಿಸಿದರು.

ಶಾಸಕ ಸುರೇಶ್ ಬಾಬು ಮಾತನಾಡಿ, ‘ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಸಮುದಾಯ ಸದೃಢವಾಗಲು ಸಂಘಟನೆಯಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಮಠದ ಕಾರ್ಯ ಶ್ಲಾಘನೀಯ’ ಎಂದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಅನಿವಾರ್ಯ. ದೇವೇಗೌಡರು ತುಮಕೂರಿಗೆ ಬರುತ್ತಾರೆ ಎನ್ನುವುದರ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ದಿನದಲ್ಲಿ ತೀರ್ಮಾನವಾಗುತ್ತದೆ. ಕಾವೇರಿ ವಿಚಾರದಲ್ಲಿ ಒಗ್ಗಟ್ಟಿನಿಂದ ಪಕ್ಷಾತೀತವಾಗಿ ಹೋರಾಟ ಮಾಡಿ ಪಡೆಯಬೇಕಿದೆ’ ಎಂದರು.

ಸಾಹಿತಿ ಎಣ್ಣೆಕಟ್ಟೆ ಚಿಕ್ಕಣ್ಣ, ಪ್ರಜಾಪ್ರತಿ ಸಂಪಾದಕ ಎಸ್. ನಾಗಣ್ಣ ಮಾತನಾಡಿದರು. ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಜನಪ್ರತಿನಿಧಿಗಳನ್ನು ಗೌರವಿಸಲಾಯಿತು.

ರೇವಣಸಿದ್ದೇಶ್ವರ ಮಠದ ಬಿಂದು ಶೇಖರ ಒಡೆಯರ್, ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎನ್‌ಎಚ್ ದೊಡ್ಡಯ್ಯ, ಉಪಾಧ್ಯಕ್ಷ ಎಚ್ ನಾಗರಾಜು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹೆಚ್ಚುವರಿ ನಿರ್ದೇಶಕ ಮುದ್ದು ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ರಂಗನಾಥ್ ಎಸ್., ಪ್ರಧಾನ ಕಾರ್ಯದರ್ಶಿ ಮನೋಹರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಯತೀಶ್, ಲಿಂಗರಾಜು, ರಮೇಶ್, ನವೀನ್, ಕಾಂತರಾಜು, ಹೇಮಂತ್, ಬಸವರಾಜು, ರಂಗಮ್ಮ ವಜ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT