ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೊ ಮಾಜಿ ಅಧ್ಯಕ್ಷ ಕಿರಣ್‌ ಕುಮಾರ್‌ಗೆ ‘ಸಿದ್ಧಗಂಗಾಶ್ರೀ’ ಪ್ರಶಸ್ತಿ

Published 12 ಡಿಸೆಂಬರ್ 2023, 16:49 IST
Last Updated 12 ಡಿಸೆಂಬರ್ 2023, 16:49 IST
ಅಕ್ಷರ ಗಾತ್ರ

ತುಮಕೂರು: ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಟ್ರಸ್ಟ್ ಕೊಡಮಾಡುವ 2022–23ನೇ ಸಾಲಿನ ‘ಸಿದ್ಧಗಂಗಾ ಶ್ರೀ’ ಪ್ರಶಸ್ತಿಗೆ ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಆಯ್ಕೆ ಆಗಿದ್ದಾರೆ.

ಪ್ರಶಸ್ತಿ ₹1 ಲಕ್ಷ ನಗದು, ಅಭಿನಂದನಾ ಪತ್ರ, ಸ್ಮರಣಿಕೆ ಒಳಗೊಂಡಿದೆ. ಬಾಹ್ಯಾಕಾಶ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಜೀವಮಾನದ ಸಾಧನೆ ಪರಿಗಣಿಸಿ ಕಿರಣ್‌ ಕುಮಾರ್‌ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸಿದ್ಧಗಂಗಾ ಮಠದಲ್ಲಿ ಡಿ. 17ರಂದು ನಡೆಯುವ ಟ್ರಸ್ಟ್‌ನ 67ನೇ ಸರ್ವಸದಸ್ಯರ ವಾರ್ಷಿಕ ಮಹಾಧಿವೇಶನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT