ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂರ್ಯನ ಸುತ್ತ ಮೂಡಿದ ಉಂಗುರ

Last Updated 17 ಜೂನ್ 2019, 16:16 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ತಾಲ್ಲೂಕಿನಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಯಿಂದ ಸರಿಸುಮಾರು ಅರ್ಧತಾಸು ಸೂರ್ಯ ವಿಸ್ಮಯಕಾರಿಯಾಗಿ ಕಂಗೊಳಿಸಿದನು.

ಸೂರ್ಯನ ಸುತ್ತಲೂ ವೃತ್ತಾಕಾರದಲ್ಲಿ ಕಪ್ಪು ಮೋಡ ಮತ್ತು ಅದರ ಸುತ್ತಲೂ ಆಕರ್ಷಕ ಹಳದಿ ಬಣ್ಣ ಗೋಚರಿಸಿದ್ದು ಬಾನಂಗಳದ ಈ ಕೌತುಕ ಸರ್ವರ ಆಕರ್ಷಣೆಯ ಕೇಂದ್ರ ಬಿಂದುವಾಯಿತು. ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್ ಈ ವಿದ್ಯಮಾನವನ್ನು ಕಂಡು ಇತರರಿಗೆ ಹೇಳಿದ ಪರಿಣಾಮ ಹಲವಾರು ಮಂದಿ ಈ ವಿದ್ಯಮಾನವನ್ನು ಕಂಡು ಅಚ್ಚರಿಗೊಳಗಾದರು.

ಮೋಡದ ಬಿನ್ನಾಣ: ಸೂರ್ಯನ ಸುತ್ತಲೂ ಆವರಿಸಿರುವ ಮೋಡದಲ್ಲಿ ಹುದುಗಿರುವ ಮಂಜುಗಡ್ಡೆ ಕಣಗಳ ಮೇಲೆ ಬೆಳಕು ಹರಿದ ಪರಿಣಾಮ ಆಕರ್ಷಕ ವೃತ್ತ ಗೋಚರಿಸಿದೆ. ಕಾಮನಬಿಲ್ಲು ಸೃಷ್ಟಿಯಾದಂತೆ ನಡೆದ ವಿದ್ಯಮಾನ ಇದಾಗಿದ್ದು ಬಣ್ಣಗಳಲ್ಲಿ ಮಾತ್ರ ವ್ಯತ್ಯಾಸ ಕಂಡುಬಂದಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚು ಇರುವ ಮತ್ತು ಮಳೆ ಬರುವ ಮುನ್ಸೂಚನೆಯನ್ನು ಇದು ನೀಡುತ್ತದೆ ಎಂದು ವಿಜ್ಞಾನ ಶಿಕ್ಷಕ ಎಂ.ಎ.ರಾಮಕೃಷ್ಣ ತಿಳಿಸಿದರು.

ವೈಜ್ಞಾನಿಕ ವಿವರಣೆ : ಮೋಡಗಳಲ್ಲಿರುವ ಮಂಜುಗಡ್ಡೆ ಹರಳುಗಳು ಸೂರ್ಯನಿಗೆ 22 ಡಿಗ್ರಿ ಅಥವಾ ಹೆಚ್ಚಿನ ಕೋನದಲ್ಲಿ ವಕ್ರೀಭವನಕ್ಕೀಡಾಗುತ್ತವೆ. ಸೂರ್ಯನ ಸುತ್ತ ವೃತ್ತಾಕಾರವಾಗಿ ಹರಡಿಕೊಳ್ಳುತ್ತವೆ. ಈ ಹರಳುಗಳ ಮೂಲಕ ಸೂರ್ಯನ ಬೆಳಕು ಹಾದುಹೋಗುವಾಗ, ಕಿರಣವು ಕಾಮನಬಿಲ್ಲಿನ ಏಳು ಬಣ್ಣಗಳಾಗಿ ಚದುರಿ, ಆಕರ್ಷಕ ಕಾಮನಬಿಲ್ಲು ಗೋಚರಿಸುತ್ತದೆ. ಇದು ತೀರಾ ಅಪರೂಪವೇನಲ್ಲ ಎನ್ನುತ್ತಾರೆ ವಿಜ್ಞಾನಿಗಳು. ವಿಭಿನ್ನ ಸ್ಥಳಗಳಲ್ಲಿ ವಿಭಿನ್ನ ಸಮಯದಲ್ಲಿ ಇದು ಗೋಚರಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT