ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಗ್ನಲ್ ಮುಕ್ತ ಪೆರಿಫೆರಲ್ ವರ್ತುಲ ರಸ್ತೆ ನಿರ್ಮಾಣ

ತುಮಕೂರು ಸ್ಮಾರ್ಟ್ ಸಿಟಿಯಿಂದ ವಾಹನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಯೋಜನೆ
Last Updated 13 ಸೆಪ್ಟೆಂಬರ್ 2019, 15:12 IST
ಅಕ್ಷರ ಗಾತ್ರ

ತುಮಕೂರು: ನಗರವು ಬೆಂಗಳೂರು ಮಹಾನಗರಕ್ಕೆ ಹೊಂದಿಕೊಂಡಿರುವುದರಿಂದ ತುಮಕೂರು ನಗರದಲ್ಲಿ ದಿನೇ ದಿನೇ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.

ನಗರದ ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದೆ. ಇದನ್ನು ಮನಗಂಡ ಸ್ಮಾರ್ಟ್ ಸಿಟಿ ಲಿಮಿಟೆಡ್ ನಗರದಲ್ಲಿ ವಾಹನ ದಟ್ಟಣೆ ಪ್ರಮಾಣವನ್ನು ತಗ್ಗಿಸಿ ಸುಗಮ ಸಂಚಾರವನ್ನು ಕಲ್ಪಿಸುವ ಸಲುವಾಗಿ ಸಿಗ್ನಲ್ ಮುಕ್ತ ಪೆರಿಫೆರಲ್ ವರ್ತುಲ ರಸ್ತೆ (ಪಿಆರ್‌ಆರ್)ನಿರ್ಮಿಸಲು ಮುಂದಾಗಿದೆ.

ಕಾಮಗಾರಿ ಚುರುಕು

ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧ್ಯಕ್ಷೆ ಡಾ.ಶಾಲಿನಿ ರಜನೀಶ್ ಅವರ ಮಾರ್ಗದರ್ಶನದಲ್ಲಿ ಯೋಜನಾ ನಿರ್ವಹಣಾ ಸಲಹೆಗಾರ ಸಂಸ್ಥೆಯಾದ ಐಪಿಇ ಗ್ಲೋಬಲ್ ಲಿಮಿಟೆಡ್‌ನವರು ಈಗಾಗಲೇ ಕಾಮಗಾರಿ ಕೈಗೊಂಡಿದ್ದು, ಪ್ರಗತಿಯಲ್ಲಿದೆ.

ನಗರದ ಹೊರವಲಯದ ಕ್ಯಾತ್ಸಂದ್ರದಿಂದ ಗುಬ್ಬಿ ಗೇಟ್‌ವರೆಗೆ ಸುಮಾರು ₹ 85 ಕೋಟಿ ವೆಚ್ಚದಲ್ಲಿ 10.5 ಕಿ.ಮೀ ಉದ್ದದ ಈ ಸಿಗ್ನಲ್ ಫ್ರೀ ಪೆರಿಫೆರಲ್ ವರ್ತುಲ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತಿದೆ.

ಇದರಿಂದ ಸಂಚಾರ ದಟ್ಟಣೆ ಕಡಿಮೆಯಾಗುವುದಲ್ಲದೇ ನಗರವನ್ನು ಕಾಡುತ್ತಿರುವ ವಾಯುಮಾಲಿನ್ಯ ಪ್ರಮಾಣವೂ ತಗ್ಗುತ್ತದೆ. ಪ್ರಸ್ತುತ ಉತ್ತರ-ದಕ್ಷಿಣ ರಾಜ್ಯಗಳಿಗೆ ಸೇರಿದ ಸರಕು ಸಾಗಣೆ ವಾಹನಗಳು ತುಮಕೂರು ಮೂಲಕವೇ ಹಾದು ಹೋಗುತ್ತಿದ್ದು, ಪೆರಿಫೆರಲ್ ರಸ್ತೆ ಪೂರ್ಣಗೊಂಡ ನಂತರ ಶೇ 25ರಷ್ಟು ಸಂಚಾರ ಒತ್ತಡ ಕಡಿಮೆಯಾಗಲಿದೆ ಎಂದು ಸ್ಮಾರ್ಟ್ ಸಿಟಿ ಮೂಲಗಳು ಹೇಳುತ್ತವೆ.

ರೈಲು ಸಂಚಾರಕ್ಕೂ ಅವಕಾಶ

ಈ ವರ್ತುಲ ರಸ್ತೆಯು ಎರಡೂ ದಿಕ್ಕಿನಲ್ಲಿ ಎರಡು ಪಥ (ಲೇನ್) ಹಾಗೂ ಸೇವಾ ರಸ್ತೆ (ಸರ್ವಿಸ್ ರಸ್ತೆ) ಹೊಂದಿದೆ.

ಪಿಆರ್ ರಸ್ತೆಯು 75 ಮೀಟರ್ ಅಗಲ ಹೊಂದಿರುವ ಈ ಚತುಷ್ಪಥ ರಸ್ತೆಯು ಕಾರಿಡಾರ್ ಮಾದರಿಯಲ್ಲಿರುತ್ತದೆ. ಜೊತೆಗೆ ಎರಡೂ ಬದಿ ಸರ್ವಿಸ್ ರಸ್ತೆಯನ್ನೂ ಸಹ ನಿರ್ಮಿಸಲಾಗುತ್ತಿದೆಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್ ಮೂಲಗಳು ಹೇಳುತ್ತವೆ.

ಅಲ್ಲದೇ, ವಿಶಾಲ ಪಾದಚಾರಿ ಮಾರ್ಗದೊಂದಿಗೆ ನೀರಿನ ಕೊಳವೆ, ಕೇಬಲ್ ಸಹಿತ ನಾನಾ ಉಪಯುಕ್ತ ಸೌಲಭ್ಯ (ಯುಟಿಲಿಟಿ) ಕಲ್ಪಿಸಲಾಗುವುದು. ಈ ಹೊಸ ಮಾರ್ಗದಲ್ಲಿ ಗಂಟೆಗೆ 100 ಕಿ.ಮೀ. ವೇಗದಲ್ಲಿ ಸಂಚರಿಸಬಹುದು. ಅಲ್ಲದೇ, ಭವಿಷ್ಯದಲ್ಲಿ ರೈಲು ಮಾರ್ಗ ರೂಪಿಸಬಹುದಾದಲ್ಲಿ ಅದಕ್ಕೂ ಸ್ಥಳವಕಾಶ ಕಲ್ಪಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್ ಮೂಲಗಳು ತಿಳಿಸಿವೆ.

**

ಅಂಕಿ ಅಂಶಗಳು

₹ 85 ಕೋಟಿ -ರಸ್ತೆ ನಿರ್ಮಾಣಕ್ಕೆ ನಿಗದಿಪಡಿಸಿದ ಮೊತ್ತ

10.5 ಕಿ.ಮೀ - ರಸ್ತೆಯ ಉದ್ದ

75 ಮೀಟರ್ - ಚತುಷ್ಪಥ ರಸ್ತೆಯು ಹೊಂದಿರುವ ವಿಸ್ತೀರ್ಣ(ಅಗಲ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT