ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ಳಿ ಪಲ್ಲಕ್ಕಿ ಉತ್ಸವ ಇಂದು

Last Updated 7 ಮಾರ್ಚ್ 2023, 9:59 IST
ಅಕ್ಷರ ಗಾತ್ರ

ಗುಬ್ಬಿ: ಪಟ್ಟಣದ ಇತಿಹಾಸ ಪ್ರಸಿದ್ಧ ಗೋಸಲ ಚನ್ನಬಸವೇಶ್ವರ ಸ್ವಾಮಿಯ ಬೆಳ್ಳಿ ಪಲ್ಲಕ್ಕಿ ಉತ್ಸವವು ಮಾರ್ಚ್ 7ರಂದು ರಾತ್ರಿ ವಿಜೃಂಭಣೆಯಿಂದ ನೆರವೇರಲಿದೆ.

ಬೆಳ್ಳಿ ಪಲ್ಲಕ್ಕಿ ಅಂಗವಾಗಿ ಚನ್ನಬಸವೇಶ್ವರ ಸ್ವಾಮಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅರ್ಚನೆ ಸೇರಿದಂತೆ ವಿಶೇಷ ಪೂಜೆ ನಡೆಯಲಿದೆ. ರಾತ್ರಿ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿದ ಬೆಳ್ಳಿ ಪಲ್ಲಕ್ಕಿಯಲ್ಲಿ ಕೂರಿಸಿ ಮೆರವಣಿಗೆ ಮಾಡಲಾಗುವುದು. ಜಾತ್ರೆಯ ಪ್ರಮುಖ ಘಟ್ಟವಾಗಿರುವ ಈ ಉತ್ಸವಕ್ಕೆ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ಉತ್ಸವದ ಅಂಗವಾಗಿ ರಾತ್ರಿ 8 ಗಂಟೆಗೆ ‘ಸಂಪೂರ್ಣ ರಾಮಾಯಣ’ ಎಂಬ ಪೌರಾಣಿಕ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ. ಉತ್ಸವದ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT