ಶಿರಾ: ಶ್ರೀರಾಮ ಸದಾ ನೆನಪಿನಲ್ಲಿ ಉಳಿಯುವಂತೆ ವಾಲ್ಮೀಕಿ ರಾಮಾಯಣ ರಚಿಸಿದ್ದಾರೆ. ಒಂದು ವೇಳೆ ವಾಲ್ಮೀಕಿ ರಾಮಾಯಣ ರಚಿಸದಿದ್ದರೆ ಇಂದು ರಾಮ ನಮ್ಮ ಮುಂದೆ ಇರುತ್ತಿರಲಿಲ್ಲ. ಆದ್ದರಿಂದ ರಾಮನಷ್ಟೇ ವಾಲ್ಮೀಕಿ ಸಹ ಪೂಜನೀಯ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿ ಹನುಮಂತನಗರದಲ್ಲಿ ಶನಿವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದರು.

ನಾಯಕ (ಪಾಳೇಗಾರ) ಸಮುದಾಯದವರು ದೇಶದಲ್ಲಿ ಉತ್ತಮ ಆಡಳಿತ ನೀಡಿದ್ದು, ಶಿರಾದಲ್ಲಿ ಕಸ್ತೂರಿ ರಂಗಪ್ಪ ನಾಯಕ ನಿರ್ಮಿಸಿರುವ ಕೋಟೆ ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಧುಗಿರಿ ಕ್ಷೇತ್ರದ ಶಾಸಕ ಕೆ.ಎನ್.ರಾಜಣ್ಣ, ವಿದ್ಯೆಯಿಂದ ಮಾತ್ರ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮುದಾಯ ಸದೃಢರಾಗಲು ಸಾಧ್ಯ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ. ಜಾತಿವಾರು ಸಮೀಕ್ಷೆಯಲ್ಲಿ ನಾಯಕ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂನಲ್ಲಿ ನಾಯಕ ಎಂದು ಬರೆಸಿ. ನಮ್ಮಲ್ಲಿರುವ ಅಸಮಾಧಾನ ದ್ವೇಷವಾಗಿ ಪರಿವರ್ತನೆ ಆಗಬಾರದು. ರಾಜಕೀಯವಾಗಿ ದ್ವೇಷವಿದ್ದರೂ ಸಮುದಾಯದ ಏಳಿಗೆಗಾಗಿ ಎಲ್ಲರೂ ಒಗ್ಗೂಡಬೇಕು ಎಂದರು.

ಶಿಡ್ಲೇಕೋಣದ ವಾಲ್ಮೀಕಿ ಸಂಸ್ಥಾನ ಮಠದ ಪೀಠಾಧ್ಯಕ್ಷ ಸಂಜಯಕುಮಾರ ಸ್ವಾಮೀಜಿ ಮಾತನಾಡಿ, ಸಮುದಾಯದ ಬೆಳೆವಣಿಗೆಗೆ ಎಲ್ಲರೂ ಒಗ್ಗಟ್ಟಿನಿಂದ ಜೊತೆಯಾಗಬೇಕು. ಸಮಾಜದಲ್ಲಿ ಇಂತಹ ಜಯಂತಿಗಳು ನಡೆಯುವುದರಿಂದ ಸೌಹಾರ್ದ, ಸಹಬಾಳ್ವೆ, ಸಹ ಜೀವನ ಹೆಚ್ವುವುದು. ದ್ವೇಷ, ಅಸೂಯೆ ಮರೆತು ಒಂದೆಡೆ ಸೇರುವುದರಿಂದ ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಪಿ.ನಂಜುಂಡಿ, ನಾಯಕ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿ.ಎನ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಸಿ.ದಾಸಪ್ಪ, ಹುಂಜನಾಳು ರಾಜಣ್ಣ, ವಾಲ್ಮೀಕಿ ನಾಯಕ ಕ್ರಿಯಾ ಸಮಿತಿ ಅಧ್ಯಕ್ಷ ಬಂಡೆ ರಾಮಕೃಷ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಮಣಿಕಂಠ, ರಾಮಣ್ಣ, ಅಂತಪುರ ಎಸ್. ಮಂಜಣ್ಣ, ಮದಕರಿ ನಾಯಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ದೇವರಾಜು, ಉಪಾಧ್ಯಕ್ಷ ಪಿ.ಚಂದ್ರಶೇಖರ್, ನಿರ್ದೇಶಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.