ಗುರುವಾರ , ನವೆಂಬರ್ 26, 2020
19 °C

ಶಿರಾ: ಕಳ್ಳಂಬೆಳ್ಳ ಚೆಕ್ ಪೋಸ್ಟ್‌ನಲ್ಲಿ ₹64 ಲಕ್ಷ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಶಿರಾ ತಾಲ್ಲೂಕು ಕಳ್ಳಂಬೆಳ್ಳ ಚೆಕ್ ಪೋಸ್ಟ್‌ನಲ್ಲಿ ಚುನಾವಣಾ ಸಿಬ್ಬಂದಿ ₹64,40,000 ನಗದು ವಶ ಪಡಿಸಿಕೊಂಡಿದ್ದಾರೆ.

ಖಾಸಗಿ ವಾಹನದಲ್ಲಿ ಈ ಹಣ ಇತ್ತು.  ಬೆಂಗಳೂರಿನಿಂದ ಚನ್ನಗಿರಿಗೆ ಹಣ ಕೊಂಡೊಯ್ಯಲಾಗುತ್ತಿತ್ತು ಎಂದು ವಾಹನದಲ್ಲಿ ಇದ್ದವರು ತಿಳಿಸಿದ್ದಾರೆ‌. ಹಣದ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಚುನಾವಣಾ ಸಿಬ್ಬಂದಿ ಮಾಹಿತಿ ನೀಡಿದ್ದಾರೆ‌. ಖಜಾನೆಯಲ್ಲಿ ಹಣವನ್ನು ಇರಿಸಲಾಗಿದೆ.

ವಾಹನದಲ್ಲಿ ಯಾವುದೇ ಪಕ್ಷದ ಪ್ರಚಾರ ಸಾಮಗ್ರಿ ಇರಲಿಲ್ಲ. 

ಚುನಾವಣಾ ಅಧಿಕಾರಿ ನಂದಿನಿದೇವಿ, ಸಹಾಯಕ ಚುನಾವಣಾ ಅಧಿಕಾರಿ ಮಮತಾ, ಕೇಂದ್ರ ಚುನಾವಣಾ ಆಯೋಗದ ವೆಚ್ಚ ವೀಕ್ಷಕ ಮೃತ್ಯುಂಜಯ ಸೇನಿ ಚೆಕ್ ಪೋಸ್ಟ್‌ಗೆ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು