ತುಮಕೂರು: ಶಿರಾ ಉಪಚುನಾವಣೆ ಮತದಾನ ಮಂಗಳವಾರ ಬೆಳಿಗ್ಗೆ 7ಕ್ಕೆ ಆರಂಭವಾಗಲಿದ್ದು, ಸಂಜೆ 6ಕ್ಕೆ ಮುಕ್ತಾಯಗೊಳ್ಳಲಿದೆ. ಈಗಾಗಲೇ ಚುನಾವಣೆಯ ಎಲ್ಲ ಸಿದ್ಧತಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ.

ಚುನಾವಣಾ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಒಟ್ಟು 1,588 ಮಂದಿ ಚುನಾವಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸೋಮವಾರ ಬೆಳಿಗ್ಗೆ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನ ಮತ್ತು ಗುಬ್ಬಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಬಸ್‌ಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜಿತ ಮತಗಟ್ಟೆಗಳಿಗೆ ತೆರಳಿದರು.

ಬೆಳಿಗ್ಗೆಯೇ ಬಂದ ಸಿಬ್ಬಂದಿ ಎಲೆಕ್ಟ್ರಾನಿಕ್ ಮತಯಂತ್ರ, ವಿವಿ ಪ್ಯಾಟ್ ಸೇರಿದಂತೆ ಅಗತ್ಯ ಚುನಾವಣಾ ಸಾಮಗ್ರಿಗಳನ್ನು ಕೊಂಡೊಯ್ದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 330 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಇದರಲ್ಲಿ 6 ಸೂಕ್ಷ್ಮ ಮತ್ತು 64 ಅತಿ ಸೂಕ್ಷ್ಮಮತಗಟ್ಟೆಗಳು ಇವೆ.

ಕೊರೊನಾ ಸೋಂಕಿತರು ಮತ್ತು ಶಂಕಿತರಿಗೆ ಮತದಾನದ ಕೊನೆಯ ಒಂದು ತಾಸನ್ನು ಮೀಸಲಿಡಲಾಗಿದೆ. ಕ್ಷೇತ್ರದಲ್ಲಿ ಜಾರಿಯಾಗಿರುವ ನಿಷೇಧಾಜ್ಞೆ ಮತದಾನ ಕೇಂದ್ರಗಳ ಸ್ಥಳಕ್ಕೆ ಅನ್ವಯಿಸುವುದಿಲ್ಲ.

ಪ್ರತಿ ಮತಗಟ್ಟೆಗೆ ಆರೋಗ್ಯ ಸಿಬ್ಬಂದಿ ನೇಮಿಸಲಾಗಿದೆ. ಮತದಾನಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಮತಕೇಂದ್ರಕ್ಕೆ ಪ್ರವೇಶಿಸುವ ಮುನ್ನ ಥರ್ಮಲ್ ಸ್ಕ್ಯಾನಿಂಗ್ ನಡೆಸಲಾಗುತ್ತದೆ. ಸ್ಯಾನಿಟೈಸ್ ನಂತರ ಮತದಾರರಿಗೆ ಒಂದು ಕೈಗವಸನ್ನು ಜಿಲ್ಲಾಡಳಿತ ನೀಡಲಿದೆ.

ಮತದಾನದ ನಂತರ ಮತ ಯಂತ್ರಗಳನ್ನು ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ಥಾಪಿಸಿರುವ ಎಣಿಕಾ ಕೇಂದ್ರದಲ್ಲಿ ಇರಿಸಲಾಗುತ್ತದೆ. ಈಗಾಗಲೇ ಕ್ಷೇತ್ರದಾದ್ಯಂತ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.