ಶನಿವಾರ, ಡಿಸೆಂಬರ್ 5, 2020
19 °C

ಕೊನೆಯ ಕ್ಷಣದ ಕಸರತ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ಉಪಚುನಾವಣೆಯ ಬಹಿರಂಗ ಪ್ರಚಾರ ಮುಕ್ತಾಯವಾದ ನಂತರ ಸೋಮವಾರ ಮನೆ ಮನೆಗೆ ತೆರಳಿ‌ ಮತದಾರರ ಮನಗೆಲ್ಲುವ ಪ್ರಯತ್ನವನ್ನು ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮಾಡಿದರು.

ಮತದಾನಕ್ಕೆ ಮುನ್ನಾ ದಿನ ಮತದಾರರನ್ನು ಸೆಳೆಯಲು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಎಲ್ಲಾ ರೀತಿಯ ಕಸರತ್ತು ನಡೆಸಿತು.

ಶಿರಾ ಕ್ಷೇತ್ರದಲ್ಲಿ ಇದುವರೆಗೂ ಜಯಗಳಿಸಲಾಗದ ಬಿಜೆಪಿ ಈ ಬಾರಿ ಡಾ.ಸಿ.ಎಂ. ರಾಜೇಶ್ ಗೌಡ ಅವರಿಗೆ ಟಿಕೆಟ್ ನೀಡಿ ಶತಾಯಗತಾಯ ಜಯಗಳಿಸಲೇ ಬೇಕು ಎಂದು ತೀವ್ರ ಕಸರತ್ತು ನಡೆಸಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದರು. 

ಕ್ಷೇತ್ರವನ್ನು ಮತ್ತೆ ಪಡೆಯಲು‌ ಕಾಂಗ್ರೆಸ್ ಸಹ ತೀವ್ರ ಕಸರತ್ತು ನಡೆಸಿದೆ. ಅನುಭವಿ ರಾಜಕಾರಣಿ ಟಿ.ಬಿ. ಜಯಚಂದ್ರ ಕಣದಲ್ಲಿದ್ದು ಹಿಂದೆ ತಾವು ಮಾಡಿರುವ ಅಭಿವೃದ್ಧಿಯ ಮೇಲೆ ಮತಯಾಚನೆ ಮಾಡಿದ್ದಾರೆ. ಜೊತೆಗೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಪ್ರಚಾರ ನಡೆಸಿ ಹೋಗಿದ್ದಾರೆ. ಜಿಲ್ಲೆಯ ಕಾಂಗ್ರೆಸ್ ಮುಖಂಡರಾದ ಡಾ.ಜಿ. ಪರಮೇಶ್ವರ, ಕೆ.ಎನ್. ರಾಜಣ್ಣ ಹಿಂದಿನ ಮನಸ್ತಾಪವನ್ನು ಮರೆತು ಒಗ್ಗಟ್ಟಿನಿಂದ ಪ್ರಚಾರದಲ್ಲಿ ತೊಡಗಿಸಿಕೊಂಡು ಮತದಾರರನ್ನು ಸೆಳೆಯುವ ಪ್ರಯತ್ನ ನಡೆಸಿದ್ದಾರೆ.

ಜೆಡಿಎಸ್ ಯಾರಿಗಿಂತ ಕಡಿಮೆ ಇಲ್ಲ ಎಂದು ದಿವಂಗತ ಶಾಸಕ ‌ಬಿ. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಟಿಕೆಟ್‌ ನೀಡಿದೆ. ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಕುಟುಂಬವೇ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿ ಪ್ರಚಾರ ನಡೆಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.