ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾದಲ್ಲಿ ಕಾಂಗ್ರೆಸ್, ಜೆಡಿಎಸ್ ಕೋಟೆ ಛಿದ್ರ: ಬಿ.ಎಸ್.ಯಡಿಯೂರಪ್ಪ

Last Updated 30 ಅಕ್ಟೋಬರ್ 2020, 10:36 IST
ಅಕ್ಷರ ಗಾತ್ರ
ADVERTISEMENT
""
""

ತುಮಕೂರು: ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆ ಎನಿಸಿರುವ ಶಿರಾ ಕ್ಷೇತ್ರವನ್ನು ನುಚ್ಚುನೂರು ಮಾಡುತ್ತೇವೆ. ಶಿರಾದಲ್ಲಿ ಬಿಜೆಪಿಯ ಗೆಲುವು ಸಾಧಿಸಲಿದೆ. ಬಿಜೆಪಿ ಗೆಲ್ಲುವುದನ್ನು ಯಾರು ತಡೆಯಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಶಿರಾ ತಾಲ್ಲೂಕಿನ ಮದಲೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮದಲೂರು ಕೆರೆಗೆ ಕಾಲುವೆ ನಿರ್ಮಾಣಕ್ಕೆ ಅನುದಾನ ನೀಡಿದ್ದೆ ನಾನು. ಆರು ತಿಂಗಳೊಳಗೆ ಕೆರೆ ತುಂಬಿಸಿ, ನಾನೇ ಉದ್ಘಾಟಿಸುತ್ತೇನೆ, ಯಡಿಯೂರಪ್ಪ ನೀಡಿದ್ದ ಭರವಸೆ ಹುಸಿ ಆಗುವುದಿಲ್ಲ ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಯಿಂದ ಶಿರಾ ತಾಲ್ಲೂಕಿನ 60 ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತೇನೆ. ಸ್ತ್ರೀಶಕ್ತಿ ಸಂಘಗಳ ಬಲವರ್ಧನೆ ಮಾಡಲಾಗುವುದು. ರಾಜ್ಯದಲ್ಲಿರುವ ಬಡವರಿಗೆ ಮನೆ, ನಿವೇಶನ ನೀಡಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ ಎಂದು ಹೇಳಿದರು.

ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವ ವಿಶ್ವಾಸ ಇದೆ. ಹೇಮಾವತಿಯಿಂದ ಮದಲೂರು ಕೆರೆಗೆ ನೀರು, ಬಗರ್ ಹುಕುಂ ಸಾಗುವಳಿ ಚೀಟಿ ವಿತರಣೆ ಬಗ್ಗೆ ಭರವಸೆ ನೀಡಿದರು.

ಮದ್ದನಕ್ಕಹಳ್ಳಿಯಲ್ಲಿ ಭೋವಿ ಸಮುದಾಯದ ಕಲ್ಲುಗಣಿ ಸಮಸ್ಯೆಯನ್ನು ಶೀಘ್ರ ಪರಿಹರಿಸುವೆ. ಶಿರಾ ‌ತಾಲ್ಲೂಕನ್ನು ಶಿಕಾರಿಪುರದಂತೆ ಮಾದರಿ ತಾಲ್ಲೂಕು ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಹೊಣೆಗಾರಿಕೆಯನ್ನು ಮತದಾರರು ತೆಗೆದುಕೊಳ್ಳಬೇಕು ಎಂದರು.

ಸಚಿವ ಶ್ರೀರಾಮುಲು ಮಾತನಾಡಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಶಿರಾ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆದರೆ ಗೆಲುವು ಸಾಧಿಸುವುದು ಬಿಜೆಪಿಯೆ. ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ವಿಜಯೇಂದ್ರ ಮುಂದಾಗಿದ್ದಾರೆ. ಹಿಂದೂ ಸಾಮ್ರಾಟ ಶಿವಾಜಿ ಅವರಂತೆ ವಿಜಯೇಂದ್ರ ಅವರು ಉಪಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು ತಂದು ಕೊಡುತ್ತಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಜೆಡಿಎಸ್‌ನಲ್ಲಿದ್ದು ಅಧಿಕಾರ ಅನುಭವಿಸಿ ಬೆನ್ನಿಗೆ ಚೂರಿ ಹಾಕಿದರು. ಶಿವಕುಮಾರ್, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಹಗಲುಗನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್‌ಗೌಡ ಮಾತನಾಡಿ, 72 ವರ್ಷಗಳಿಂದ ಶಿರಾ ಹಿಂದುಳಿದ ಪ್ರದೇಶವಾಗಿಯೇ ಉಳಿದಿದೆ. ಮೂಲಸೌಲಭ್ಯಗಳು ಕ್ಷೇತ್ರದಲ್ಲಿ ಇಲ್ಲ. ಕಾಡುಗೊಲ್ಲರಿಗೆ ನಿಗಮ ರೂಪಿಸಿದ ಏಕೈಕ

ಮುಖ್ಯಮಂತ್ರಿ ಯಡಿಯೂರಪ್ಪ ಅವರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದೆ. ಬಿಜೆಪಿಗೆ ಮತ ನೀಡಿದರೆ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಸಹಕಾರಿಯಾಗಲಿದೆ ಎಂದರು.

ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಈ ಕ್ಷೇತ್ರದಲ್ಲಿ ಬಿಜೆಪಿ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತದೆ. ಮತ ಎಣಿಕೆ ದಿನ ವಿಜಯೋತ್ಸವ ಆಚರಿಸಲಿದ್ದೇವೆ. ಕಾರ್ಯಕರ್ತರ ಉತ್ಸಾಹ ನೋಡಿದರೆ ಬಿಜೆಪಿ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ನಾರಾಯಣಗೌಡ, ಸಂಸದರಾದ ನಾರಾಯಣಸ್ವಾಮಿ, ಪ್ರತಾಪ್ ಸಿಂಹ, ಮುನಿಸ್ವಾಮಿ,

ಪಿ.ಸಿ.ಮೋಹನ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಶಾಸಕರಾದ ಜ್ಯೋತಿಗಣೇಶ್, ಬಿ.ಸಿ.ನಾಗೇಶ್, ಪೂರ್ಣಿಮಾ ಶ್ರೀನಿವಾಸ್, ತಿಪ್ಪಾರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT