ಶಿರಾ: ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್ 13ಕ್ಕೆ ಚುನಾವಣೆ ನಿಗದಿಪಡಿಸಿ ಮಧುಗಿರಿ ಉಪವಿಭಾಗಾಧಿಕಾರಿ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದಾರೆ.
ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದೆ.
ಜಿಲ್ಲೆಯ ಬಹುತೇಕ ಸ್ಥಳೀಯ ಸಂಸ್ಥೆಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೂ ತಾಲ್ಲೂಕಿನಲ್ಲಿ ಚುನಾವಣೆ ದಿನಾಂಕ ಪ್ರಕಟವಾಗಿರಲಿಲ್ಲ. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಸೆ. 3ರಂದು ವರದಿ ಪ್ರಕಟಣವಾಗಿತ್ತು.
13ರಂದು ಬೆಳಿಗ್ಗೆ 10ರಿಂದ 11ರವರೆಗೆ ನಾಮಪತ್ರ ಸಲ್ಲಿಕೆ, ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭ, ಮಧ್ಯಾಹ್ನ 1ರಿಂದ 1.10ರವರೆಗೆ ನಾಮಪತ್ರ ಪರಿಶೀಲನೆ. ಮಧ್ಯಾಹ್ನ 1.10ರಿಂದ 1.20ರವರೆಗೆ ನಾಮಪತ್ರ ಹಿಂಪಡೆದುಕೊಳ್ಳುವಿಕೆ. ಅವಶ್ಯವಿದ್ದರೆ ಮಧ್ಯಾಹ್ನ 1.20ರಿಂದ ಚುನಾವಣೆ ನಡೆಯಲಿದೆ.