ಶಿರಾ: ತಾಲ್ಲೂಕಿನ ದ್ವಾರಾಳು ಬಳಿಯ ರಾಷ್ಟ್ರೀಯ ಹೆದ್ದಾರಿ– 48ರಲ್ಲಿ ಮಂಗಳವಾರ ಕೆಟ್ಟು ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬಸ್ ಚಾಲಕ ಶ್ರೀಕಾಂತ್ (50) ಸೇರಿ ಇಬ್ಬರು ಮೃತಪಟ್ಟಿದ್ದಾರೆ. 33 ಮಂದಿ ಗಾಯಗೊಂಡಿದ್ದಾರೆ.

ಮೃತಪಟ್ಟ ಮತ್ತೊಬ್ಬರ ವಿವರ ಲಭ್ಯವಾಗಿಲ್ಲ. ಬೆಂಗಳೂರಿನಿಂದ ಚಿತ್ರದುರ್ಗ ಕಡೆಗೆ ತೆರಳುತ್ತಿದ್ದ ಬಸ್ ದ್ವಾರಾಳು ಸೇತುವೆಯ ಮೇಲೆ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿದ್ದ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. 23 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ, ಮೂವರನ್ನು ಚಿತ್ರದುರ್ಗಕ್ಕೆ ರವಾನಿಸಲಾಗಿದೆ. ಉಳಿದವರಿಗೆ ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.