ಹಕ್ಕುಪತ್ರ ನೀಡಲು ಕ್ರಮಕೈಗೊಳ್ಳಿ

7
ಕುಂದುಕೊರತೆ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ‍ಸೂಚನೆ

ಹಕ್ಕುಪತ್ರ ನೀಡಲು ಕ್ರಮಕೈಗೊಳ್ಳಿ

Published:
Updated:
Deccan Herald

ತುಮಕೂರು: 94 ಸಿಸಿ ಅಡಿ ಮನೆ, ನಿವೇಶನದ ಹಕ್ಕುಪತ್ರಕ್ಕೆ ಅರ್ಜಿ ಸಲ್ಲಿಸಿರುವ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ತುಮಕೂರು ಮಹಾನಗರ ಪಾಲಿಕೆ ಕ್ರಮಕೈಗೊಳ್ಳಬೇಕು ಎಂದು ಸೋಮವಾರ ನಡೆದ ಕುಂದುಕೊರತೆ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ‍ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ನಿವೇಶನ ರಹಿತ, ವಸತಿ ರಹಿತ ಪಟ್ಟಣ ವ್ಯಾಪ್ತಿಯ ಕುಟುಂಬಗಳ ಸಮೀಕ್ಷೆ ಆಧಾರದಲ್ಲಿ ಸರ್ಕಾರಿ ಭೂಮಿ ಗುರುತಿಸಿ ಸರ್ವರಿಗೂ ಸೂರು ಒದಗಿಸುವುದು, ದಿಬ್ಬೂರಿನ ದೇವರಾಜ ಅರಸು ಬಡವಾಣೆಯಲ್ಲಿ ಪಾರ್ಕ್ ಅಭಿವೃದ್ದಿ ಹಾಗೂ ಸ್ಮಾರ್ಟ್‌ಸಿಟಿ ಲಿಮಿಟೆಡ್‌ನಿಂದ ಮಾರಿಯಮ್ಮ ನಗರದ 87 ಕುಟುಂಬಗಳಿಗೆ ವಸತಿ ನಿರ್ಮಾಣಕ್ಕೆ ಟೆಂಡರ್ ಕರೆಯಲು ಜಿಲ್ಲಾಧಿಕಾರಿ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿ 3 ತಿಂಗಳಿಗೆ ಒಮ್ಮೆ ಕೊಳಚೆ ಪ್ರದೇಶ ನಿವಾಸಿಗಳ ಕುಂದು ಕೊರತೆ ಸಭೆ ಕರೆದು ಸಮಸ್ಯೆಗಳನ್ನು ಪರಿಹಾರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸ್ಲಂ ಜನಾಂದೋಲನಾ ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ಮಾತನಾಡಿ, ‘ಜಿಲ್ಲೆಯಲ್ಲಿರುವ ಅಘೋಷಿತ ಕೊಳಚೆ ಪ್ರದೇಶಗಳ ಘೋಷಣೆ ಮತ್ತು ಘೋಷಿತ ಕೊಳಚೆ ಪ್ರದೇಶಗಳಿಗೆ ನೋಂದಾಣಿ ಪ್ರಮಾಣ ಪತ್ರ ನೀಡಬೇಕು’ ಎಂದು ಆಗ್ರಹಿಸಿದರು.

 ದೇವರಾಜ ಅರಸು ಬಡವಾಣೆಯಲ್ಲಿರುವ ಯುಜಿಡಿ, ಕುಡಿಯುವ ನೀರಿನ ಸಮಸ್ಯೆ, ಮಾರಿಯಮ್ಮ ನಗರದಲ್ಲಿ ಶೀಘ್ರ ವಸತಿ ನಿರ್ಮಾಣ ಕಾಮಗಾರಿ, ನಿವೇಶನ ರಹಿತ ಕುಟುಂಬಗಳಿಗೆ ಸರ್ಕಾರಿ ಭೂಮಿ ಗುರುತಿಸಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಮನೆ ನಿರ್ಮಿಸಿಕೊಳ್ಳಲು ನೆರವು, ಬೀದಿ ಬದಿ ವ್ಯಾಪಾರಿ ವಲಯಗಳನ್ನು ಗುರುತಿಸುವುದು ಹೀಗೆ ಹಲವು ವಿಷಯಗಳು ಸಭೆಯಲ್ಲಿ ಚರ್ಚೆಗೆ ಬಂದವು.

ಈ ಸಭೆಯಲ್ಲಿ ಜಿಲ್ಲಾ ಯೋಜನಾ ನಿರ್ದೇಶಕಿ ಅನುಮಪ, ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ದೇವರಾಜ್, ಸ್ಮಾಟ್ ಸಿಟಿ ಲಿಮಿಟೆಡ್ ನ ಸಿಇಒ ರಂಗಸ್ವಾಮಿ, ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಎಇಇ ಹನುಂತರೆಡ್ಡಿ, ಕೊಳೆಗೇರಿ ಸಮಿತಿ ಕಾರ್ಯದರ್ಶಿ ಶೆಟ್ಟಾಳಯ್ಯ, ಶಂಕರಪ್ಪ, ದೊಡ್ಡರಂಗಪ್ಪ, ಮುರುಗ. ಚಕ್ರಪಾಣಿ, ರಘು, ಶಾರದಮ್ಮ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !