ಭಾನುವಾರ, ಜೂಲೈ 5, 2020
24 °C

ತುಮಕೂರು | ‘ವಂಚಿತ ಸಮುದಾಯಕ್ಕೆ ತೆರಿಗೆ ವಿಧಿಸದಿರಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಲಾಕ್‌ಡೌನ್‍ನಿಂದ ನಗರ ವಂಚಿತ ಸಮುದಾಯಗಳು ಸಂಕಷ್ಟಕ್ಕೆ ಒಳಗಾಗಿವೆ. ಈ ಹಿನ್ನೆಲೆಯಲ್ಲಿ ಯಥಾಸ್ಥಿತಿ ಬರುವವರೆಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವುದೇ ರೀತಿಯ ತೆರಿಗೆಗಳನ್ನು ವಿಧಿಸಬಾರದು ಎಂದು ಪಿಯುಸಿಎಲ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ದೊರೈರಾಜ್ ಆಗ್ರಹಿಸಿದರು.

ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ, ಪಿಯುಸಿಎಲ್ ಮತ್ತು ಪುಡ್‌ ಫಾರ್ ದಿ ಅಂಗ್ರಿ ಫೌಂಡೇಷ್ನ್‍ನಿಂದ ನಗರದ ವಿವಿಧ ಪ್ರದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಮುದಾಯಗಳಿಗೆ ಸೋಮವಾರ ಆಹಾರ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು.

ಇತ್ತೀಚೆಗೆ ವಿದ್ಯುತ್ ಬಿಲ್ ಹೆಚ್ಚಳ ಮತ್ತು ಸ್ಥಳೀಯ ಸಂಸ್ಥೆಗಳ ಆಸ್ತಿ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿರುವುದು ಖಂಡನೀಯ. ಸಮಾಜಕ್ಕೆ ಅಗತ್ಯವಿರುವ ಕೆಲಸಗಳನ್ನು ಮಾಡುತ್ತ ಜಾತಿ ಹಿನ್ನೆಲೆಯಲ್ಲಿ ತಾರತಮ್ಯಕ್ಕೆ ಒಳಗಾದ ವರ್ಗಗಳನ್ನು ಸರ್ಕಾರಗಳು ನಿರ್ಲಕ್ಷಿಸಿವೆ ಎಂದು ದೂರಿದರು.

ವಿಶ್ವವನ್ನು ಕಾಡುತ್ತಿರುವ ಕೊರೊನಾ ಸೋಂಕಿನ ಬಗ್ಗೆ ಅರಿಯುವುದರ ಜತೆಗೆ ಎಚ್ಚರಿಕೆಯಿಂದ ಇರಬೇಕು. ವೈಜ್ಞಾನಿಕವಾಗಿ ಔಷಧಗಳನ್ನು ಪಡೆದು ಸ್ವಚ್ಛತೆಗೆ ಆದ್ಯತೆ ನೀಡಬೇಕು. ತಜ್ಞರು ಸೂಚಿಸುವ ಸಲಹೆಗಳನ್ನು ಪಾಲಿಸಬೇಕು ಎಂದರು.

ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ಕೊಳೆಗೇರಿ ಸಮಿತಿಯ ಶೆಟ್ಟಾಳಯ್ಯ, ಶಂಕರಯ್ಯ, ಮೊಹಮ್ಮದ್ ಹಯಾತ್, ಧನಂಜಯ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.