ತುಮಕೂರು: ರಾಜ್ಯದಲ್ಲಿ ಮೊದಲ ಬಾರಿಗೆ ಸ್ಲಮ್ ಜನರಿಗೆ ಹಕ್ಕುಪತ್ರ ನೀಡುವ ಆಂದೋಲನ ಹಮ್ಮಿಕೊಳ್ಳಲಾಗಿದೆ. 5 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ ಹೇಳಿದರು.

ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದರು.

ನಗರದ 30 ಘೋಷಿತ ಕೊಳಚೆ ಪ್ರದೇಶಗಳಲ್ಲಿ 22 ಪಾಲಿಕೆ ಮತ್ತು ಸರ್ಕಾರಿ ಒಡೆತನದಲ್ಲಿವೆ. ಇಲ್ಲಿ ವಾಸಿಸುವ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಆ. 15ರ ಒಳಗೆ ಸರ್ವೆ ನಡೆಸಲಾಗುವುದು. ಇದಕ್ಕಾಗಿ 40 ಜನರ ತಂಡ ನಿಯೋಜಿಸಲಾಗಿದೆ ಎಂದರು.

ನಗರಾಭಿವೃದ್ಧಿ ಕೋಶದ ನಿರ್ದೇಶಕ ಯೋಗಾನಂದ್, ‘ಸ್ಲಮ್ಗಳಿಗೆ ದಾಖಲಾತಿ ನೀಡುವ ವಿಚಾರ ಕಳೆದ 20 ವರ್ಷಗಳಿಂದ ಚರ್ಚೆಯಲ್ಲಿದೆ. ಸಮೀಕ್ಷೆ ವೇಳೆ 4 ರೀತಿಯ ಮಾಹಿತಿ ಕಲೆ ಹಾಕಲಾಗುತ್ತದೆ. 22 ಸ್ಲಮ್ಗಳಲ್ಲಿ 7,670 ಕುಟುಂಬಗಳನ್ನು ಸಮೀಕ್ಷೆಗೆ ಒಳಪಡಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಬಾನು ಪ್ರತಾಪ್ಸಿಂಹ, ಸ್ಲಂ ಸಮಿತಿ ಅಧ್ಯಕ್ಷ ಎ.ನರಸಿಂಹಮೂರ್ತಿ ಇತರರು ಸಭೆಯಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.