ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ಕಾಯ್ದೆ ವಿರೋಧ ಸರಿಯಲ್ಲ: ಮಾಜಿ ಸಚಿವ ಸೊಗಡು ಶಿವಣ್ಣ

Last Updated 22 ಡಿಸೆಂಬರ್ 2019, 13:49 IST
ಅಕ್ಷರ ಗಾತ್ರ

ತುಮಕೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ತುಮಕೂರಿನಲ್ಲೂ ಪ್ರತಿಭಟನೆ ನಡೆಸಲು ಮಾಜಿ ಶಾಸಕರಿಬ್ಬರು ಮುಸ್ಲಿಂ ಜನರಿಗೆ ಕುಮ್ಮಕ್ಕು ನೀಡುತ್ತಿದ್ದು, ಪೊಲೀಸರು ಇದಕ್ಕೆ ಅವಕಾಶ ನೀಡಬಾರದು ಹಾಗೂ ಮುಸ್ಲಿಂ ಬಾಂಧವರು ಯಾವುದೇ ಕಾರಣಕ್ಕೂ ಪ್ರತಿಭಟನೆಯಲ್ಲಿ ಭಾಗವಹಿಸಬಾರದು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಮನವಿ ಮಾಡಿದರು.

ರಾಜ್ಯದಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವುದು ಸರಿಯಲ್ಲ. ಕೇಂದ್ರ ಸರ್ಕಾರ ತಂದಿರುವ ಕಾನೂನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ಮುಖಂಡರ ಕುಮ್ಮಕ್ಕಿದೆ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಕಾಂಗ್ರೆಸ್, ಕಮ್ಯುನಿಷ್ಟ್, ಎಸ್‍ಎಫ್‍ಐ ಮತ್ತಿತರರು ದೇಶದ್ರೋಹಿ ಕೆಲಸ ಮಾಡಲು ಆರಂಭಿಸಿದ್ದಾರೆ. ಇವರ ಮಾತನ್ನು ನಾಗರಿಕರು ಕೇಳಬಾರದು, ನಮ್ಮ ದೇಶದ ಮುಸ್ಲಿಂ ಬಂಧುಗಳಿಗೆ ಕಾಯ್ದೆಯಿಂದ ಯಾವುದೇ ತೊಂದರೆ ಇಲ್ಲ. ಆದರೆ, ಮುಸ್ಲಿಂ ಜನರು ಕಾಂಗ್ರೆಸ್ ಹಾಗೂ ಕಮ್ಯುನಿಷ್ಟ್‌ಗಳ ಜತೆಗಿದ್ದರೆ ಮುಂದಿನ ದಿನದಲ್ಲಿ ದೇಶಕ್ಕೆ ಗಂಡಾಂತರ ಬರಲಿದೆ. ಕೂಡಲೇ ಎಚ್ಚೆತ್ತುಕೊಂಡು ಸಹಿಷ್ಣುತೆಯಿಂದ ಬಾಳಬೇಕು ಎಂದರು.

ಬಿಜೆಪಿ ಮುಖಂಡ ಎಂ.ಬಿ.ನಂದೀಶ್ ಮಾತನಾಡಿ, ‘ಅನೇಕರಿಗೆ ಪ್ರತಿಭಟನೆ ಯಾವ ಉದ್ದೇಶಕ್ಕೆ ಮಾಡುತ್ತಿದ್ದೇವೆ ಎಂಬ ಸ್ಪಷ್ಟತೆ ಇಲ್ಲ. ದೇಶಕ್ಕೆ ನುಸುಳಿಕೊಂಡು ಬಂದಿರುವವರ ವಿರುದ್ಧ ಕಾನೂನು ರೂಪಿಸಿದ್ದು, ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದರಿಲ್ಲಿ ಅರ್ಥವಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT