ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಧಾನ್ಯ ಮೇಳ: ಜಾಗೃತಿ ಜಾಥಾ

Last Updated 2 ಜನವರಿ 2019, 16:01 IST
ಅಕ್ಷರ ಗಾತ್ರ

ತುಮಕೂರು: ಜ.5 ಮತ್ತು 6 ರಂದು ನಗರದಲ್ಲಿ ನಡೆಯುವ ಸಾವಯವ ಮತ್ತು ಸಿರಿಧಾನ್ಯ ಮೇಳದ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸುವ ಸಲುವಾಗಿ ಬುಧವಾರ ನಗರದ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಕಾಲ್ನಡಿಗೆ ಜಾಥಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಸಿರಿಧಾನ್ಯಗಳ ಬೆಳೆಯುವ ಮತ್ತು ಪೋಷಕಾಂಶಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರ ಸಾವಯವ ಕೃಷಿ ಮತ್ತು ಸಿರಿಧಾನ್ಯ ಉತ್ಪನ್ನಗಳಿಗೆ ಅತಿ ಹೆಚ್ಚು ನೀಡಿ ಈ ಮೇಳವನ್ನು ಆಯೋಜಿಸಲಾಗಿದೆ. ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸಿರಿಧಾನ್ಯಗಳನ್ನು ಆಹಾರದಲ್ಲಿ ಬಳಸಿದರೆ ಆರೋಗ್ಯವಂತರಾಗಬಹುದು. ಹಾಗಾಗಿ ಪ್ರತಿಯೊಬ್ಬ ರೈತರು ಮತ್ತು ಜನಸಾಮಾನ್ಯರು ಸಿರಿಧಾನ್ಯ ಬಳಕೆಗೆ ಮುಂದಾಗಬೇಕು. ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯವನ್ನು ಸಿರಿಧಾನ್ಯ ರಾಜ್ಯವನ್ನಾಗಿ ಮಾರ್ಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಯಸ್ವಾಮಿ ಮಾತನಾಡಿ, ‘ಈ ಮೇಳದಲ್ಲಿ 100 ಕ್ಕೂ ಹೆಚ್ಚು ಮಳಿಗೆಗಳು ಭಾಗವಹಿಸುವ ನಿರೀಕ್ಷೆ ಇದೆ. ಹಾಗಾಗಿ ಇದರ ಪ್ರಯೋಜನವನ್ನು ಜಿಲ್ಲೆಯ ರೈತರು, ಸಾಮಾನ್ಯರು ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕೃಷಿ ಇಲಾಖೆ, ಕೃಷಿ ಸಂಬಂಧಿತ ಇಲಾಖೆಗಳು ಹಾಗೂ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘದ ಒಕ್ಕೂಟದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಈ ಕಾಲ್ನಡಿಗೆ ಜಾಥಾವು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಹೊರಟು ಸೋಮೇಶ್ವರಪುರಂ ಮಾರ್ಗವಾಗಿ ದೋಬಿಘಾಟ್ ರಸ್ತೆ ಮೂಲಕ ಮಹಾತ್ಮಗಾಂಧಿ ಕ್ರೀಡಾಂಗಣ ತಲುಪಿತು.

ಈ ಜಾಥಾದಲ್ಲಿ ಕೃಷಿ ಇಲಾಖೆ ಅಧಿಕಾರಿ ಉಮೇಶ್, ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಗೋವಿಂದರಾಜು, ಅಶೋಕ್, ನಿರ್ಮಿತಿ ಕೇಂದ್ರದ ರಾಜಶೇಖರ್, ರಾಜಕುಮಾರ್, ಲೀಡ್ ಬ್ಯಾಂಕ್‌ನ ಜ್ಯೋತಿಗಣೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಅಥ್ಲೆಟಿಕ್ ವಿದ್ಯಾರ್ಥಿಗಳು, ಶಾಲಾ ಮಕ್ಕಳು ಹಾಗೂ ನೂರಾರು ಮಂದಿ ರೈತರೊಂದಿಗೆ ಹೆಜ್ಜೆ ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT